ಮೈತ್ರಿ ಅಭ್ಯರ್ಥಿಗೆ ಸಂಕಷ್ಟ: ಸಾಮೂಹಿಕ ರಾಜಿನಾಮೆ ನೀಡಿದ ಹಾಸನ ಕಾಂಗ್ರೆಸ್ ನಾಯಕರು!

ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಈ ಮಧ್ಯೆ ಹಾಸನದಲ್ಲಿ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದ್ದು ಕೈ ನಾಯಕರು ಸಾಮೂಹಿಕ ರಾಜಿನಾಮೆ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ನವದೆಹಲಿ: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಈ ಮಧ್ಯೆ ಹಾಸನದಲ್ಲಿ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದ್ದು ಕೈ ನಾಯಕರು ಸಾಮೂಹಿಕ ರಾಜಿನಾಮೆ ನೀಡಿದ್ದಾರೆ. 
ಹಾಸನದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಂಥರ್ ಗೌಡ ವಜಾ ಹಿನ್ನೆಲೆ ಹಲವರು ತಮ್ಮ ಸ್ಥಾನಕ್ಕೆ ಸಾಮೂಹಿಕ ರಾಜಿನಾಮೆ ನೀಡಿದ್ದಾರೆ. ಡಿಯುಸಿಸಿ ಉಪಾಧ್ಯಕ್ಷ ಹಾಗೂ ಇತರೆ ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಮಂಥರ್ ಗೌಡ ಅವರ ತಂದೆ ಎಂ. ಮಂಜು ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಅಲ್ಲದೆ ಹಾಸನ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಎ. ಮಂಜು ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಮಂಥರ್ ಗೌಡ ಅವರು ಸಹ ಎ. ಮಂಜು ಅವರ ಹಾದಿ ತುಳಿಯುವರೇ ಕಾದು ನೋಡಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com