ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಸಮಸ್ಯೆ ಬೇಕಾದರೇ ಬಗೆಹರಿಸೋಣ. ಇದು ಒಂದು ಕ್ಷೇತ್ರದ ಪ್ರಶ್ನೆಯಲ್ಲ. ದೇಶದ ಹಿತಾಸಕ್ತಿಯ ಪ್ರಶ್ನೆ. ಹಾಗಾಗಿ ಎಲ್ಲ ನಾಯಕರು ಒಟ್ಟಾಗಿ ಮೈತ್ರಿ ಅಭ್ಯರ್ಥಿ ನಿಖಿಲ್ ಪರವಾಗಿ ಕೆಲಸ ಮಾಡಿ ಎಂದಿದ್ದಾರೆ. ಒಂದು ವೇಳೆ ಅದು ಸಾಧ್ಯವಾಗದಿದ್ದರೆ ತಟಸ್ಥವಾಗಿದ್ದು ಬಿಡಿ. ಇಲ್ಲದೇ ಹೋದರೆ ಕಾಂಗ್ರೆಸ್ ಬಿಟ್ಟೋಗಿ. ಆದರೆ, ಪಕ್ಷದ ವಿರುದ್ಧವಾಗಿ ನಡೆದು ಕೆಂಗೆಣ್ಣಿಗೆ ಗುರಿಯಾಗಬೇಡಿ ಎಂದು ಕಾಂಗ್ರೆಸ್ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.