ಸಿದ್ದರಾಮಯ್ಯ ಸಭೆ ಪರಿಣಾಮ ಬೀರಲ್ಲ- ಸುಮಲತಾ ಅಂಬರೀಷ್

ಬಿಜೆಪಿ ಅಲ್ಲದೇ, ಜೆಡಿಎಸ್ ಕಾರ್ಯಕರ್ತರು ಕೂಡಾ ನನ್ನಗೆ ಬೆಂಬಲ ನೀಡುತ್ತಿದ್ದಾರೆ ಎಂದು ಹೇಳುವ ಮೂಲಕ ಸುಮಲತಾ ಅಂಬರೀಷ್ ಜೆಡಿಎಸ್ ಗೆ ಶಾಕ್ ನೀಡಿದ್ದಾರೆ
ಸುಮಲತಾ ಅಂಬರೀಷ್
ಸುಮಲತಾ ಅಂಬರೀಷ್
Updated on: 

ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಇಂದು ಮದ್ದೂರು ತಾಲೂಕಿನ ಯಡಗನಹಳ್ಳಿ,ಕಾಡುಕೊತ್ತನಹಳ್ಳಿ ಮತ್ತಿತರ ಹಳ್ಳಿಗಳಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಹೋದ ಕಡೆಯಲೆಲ್ಲಾ ಉತ್ತಮ ಬೆಂಬಲ ದೊರೆಯುತ್ತಿದ್ದು, ಯಡಗನಹಳ್ಳಿಯಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಸುಮಲತಾ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಅಂಬರೀಷ್, ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರೊಂದಿಗೆ ಸಿದ್ದರಾಮಯ್ಯ ನಡೆಸಿರುವ ಸಭೆ ಚುನಾವಣೆ ಮೇಲೆ ಪರಿಣಾಮ ಬೀರಲ್ಲ ಎಂದರು.
ಅಂಬರೀಷ್ 23 ವರ್ಷ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದರು. ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೂ ಅಸ್ತಿತ್ವದ ಪ್ರಶ್ನೆ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ತಮ್ಮನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ. ಕೆಲವರ ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ಕೊಟ್ಟು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಇದು ತುಂಬಾ ಖುಷಿ ನೀಡಿದೆ ಎಂದರು.
ಒಂದು ವೇಳೆ ಮೈತ್ರಿಗೆ ಕಟುಬಿದ್ದು, ನಿಖಿಲ್ ಪರ ಪ್ರಚಾರ ಮಾಡಿದ್ದರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸುಮಲತಾ ಅಂಬರೀಷ್, ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ನನ್ನನ್ನು ಬೆಂಬಲಿಸುವ ವಿಶ್ವಾಸ ಇರುವುದಾಗಿ ಹೇಳಿದರು.
ಬಿಜೆಪಿ ಅಲ್ಲದೇ, ಜೆಡಿಎಸ್ ಕಾರ್ಯಕರ್ತರು ಕೂಡಾ ನನ್ನಗೆ ಬೆಂಬಲ ನೀಡುತ್ತಿದ್ದಾರೆ ಎಂದು  ಹೇಳುವ ಮೂಲಕ ಸುಮಲತಾ ಅಂಬರೀಷ್ ಜೆಡಿಎಸ್ ಗೆ ಶಾಕ್ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com