ಮಂಡ್ಯದಲ್ಲಿ ನಿಖಿಲ್ ಸೋಲಿಸಿ, ನನ್ನನ್ನು ಮುಗಿಸಲು ಷಡ್ಯಂತ್ರ ನಡೆದಿದೆ: ಎಚ್.ಡಿ ಕುಮಾರಸ್ವಾಮಿ

ಮಂಡ್ಯ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಿ ನನ್ನನ್ನು ಮುಗಿಸಲು ಪ್ರಯತ್ನ ನಡೆಯುತ್ತಿದೆ ಎಂದು ಸಿಎಂ ಕುಮಾರಸ್ವಾಮಿ ...
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
ಉಡುಪಿ: ಮಂಡ್ಯ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಿ ನನ್ನನ್ನು ಮುಗಿಸಲು ಪ್ರಯತ್ನ ನಡೆಯುತ್ತಿದೆ ಎಂದು ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಂಡ್ಯದಲ್ಲಿ ನನ್ನನ್ನು ಮುಗಿಸಲು ಪ್ರಯತ್ನ ನಡೆಯುತ್ತಿದೆ. ನಾನು ಮಂಡ್ಯಕ್ಕೆ ಹೋಗಿ 6 ದಿನ ಆಯ್ತು ಅಷ್ಟೇ. ಅಲ್ಲಿ ಜೆಡಿಎಸ್ ಕುತಂತ್ರ ಮಾಡುತ್ತಿಲ್ಲ. ಕುತಂತ್ರ ಮಾಡುತ್ತಿರುವವರು ನಮ್ಮ ವಿರೋಧಿಗಳು ಎಂದು ಹೇಳಿದ್ದಾರೆ.
ನಾನು ಜೆಡಿಎಸ್  ಕಾರ್ಯಕರ್ತರನ್ನು ನಂಬಿದ್ದೇನೆ, ಅಲ್ಲಿ ಯಾರ್ಯಾರು ಏನೇನು ಮಾಡುತ್ತಿದ್ದಾರೆ ಎಂಬುದು ನನಗೆ ಚೆನ್ನಾಗಿ ಗೊತ್ತಿದೆ ಎಂದು ಹೇಳಿರುವ ಕುಮಾರಸ್ವಾಮಿ, ಮಂಡ್ಯದಲ್ಲಿ ಸ್ಟ್ರಾಟಜಿ ಮಾಡಿ ಚುನಾವಣೆ ಮಾಡುವ ಅಗತ್ಯ ಇಲ್ಲ. ಮಂಡ್ಯ ಜಿಲ್ಲೆ ನಮ್ಮ ಹೃದಯ ಇದ್ದಂತೆ. ಅಲ್ಲಿನ ನಾಡಿಮಿಡಿತ ನಮಗೆ ಗೊತ್ತಿದೆ. ಯಾರ ಡ್ರಾಮಾನೂ ಮಂಡ್ಯದಲ್ಲಿ ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ. 
ಮಂಡ್ಯದಲ್ಲಿ ಜೆಡಿಎಸ್ ನಿರ್ನಾಮ ಮಾಡಲು ಎಲ್ಲರೂ ಹೊರಟಿದ್ದಾರೆ. ನಾನು ಚೆಲುವರಾಯ ಸ್ವಾಮಿ ಬಗ್ಗೆ ಮಾತೇ ಆಡಿಲ್ಲ. ಬೆನ್ನಿಗೆ ಚೂರಿ ಹಾಕುವವರ ಬಗ್ಗೆ ಮಾತನಾಡಿದ್ದೆ ಎಂದು ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com