ಮಂಗಳೂರು: ಒಂದು ವೇಳೆ ಮಹಾಘಟ ಬಂಧನ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೇ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಪ್ರಧಾನ ಮಂತ್ರಿ ಅಭ್ಯರ್ಥಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ,.
ಮಂಗಳೂರಿನಲ್ಲಿ ಸುದ್ದಿಗೋಷ್ಚಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಸರ್ಕಾರ ಹಾಗೂ ದೇಶದ ಹಿತದೃಷ್ಟಿಯಿಂದ ಅವರು ಮಹಾಘಟ ಬಂಧನಕ್ಕೆ ಸಲಹೆಗಾರರಾಗಿ ಕೆಲಸ ಮಾಡುತ್ತಾರೆ ಎಂದು ತಿಳಿಸಿದ್ದಾರೆ,
ಹಾಗಾದರೇ ಮಹಾಘಟ ಬಂಧನದ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಅವರು ಉತ್ತರಿಸಲು ನಿರಾಕರಿಸಿದ ಅವರು, ಪ್ರಧಾನಿ ಅಭ್ಯರ್ಥಿ ಯಾರು ಎಂಬುದು ಮೊದಲ ಆದ್ಯತೆಯಲ್ಲ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ 20 ರಿಂದ 22 ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಿದರೇ ದೇಶ ಮತ್ತೊಮ್ಮೆ ಕನ್ನಡಿಗರೊಬ್ಬರನ್ನು ಪ್ರಧಾನಿಯನ್ನಾಗಿ ನೋಡುವ ಅವಕಾಶ ಸಿಗಲಿದೆ ಎಂದು ಫೆಬ್ರವರಿ 27 ರಂದು ಹೇಳಿದ್ದರು,
1996 ರಲ್ಲಿ ನೀವು ಹರಸಿದ್ದರಿಂದ ದೇವೇಗೌಡರು ಪ್ರಧಾನಿಯಾಗಿದ್ದರು, ನೀವು ಮತ್ತೊಮ್ಮೆ ಆಶೀರ್ವಾದಿಸಿದರೇ ಕನ್ನಡಿಗರೊಬ್ಬರು ಮತ್ತೆ ಪ್ರಧಾನಿಯಾಗುವ ಸಾಧ್ಯತೆಯಿದೆ ಎಂದು ಮಂಡ್ಯದ ರ್ಯಾಲಿಯಲ್ಲಿ ಕುಮಾರಸ್ವಾಮಿ ಹೇಳಿದ್ದರು.