ಟೈಮ್ಸ್ ನೌ-ವಿಎಂಆರ್ ಸಮೀಕ್ಷೆ; ಕರ್ನಾಟಕದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ? ಮಂಡ್ಯ ಗೆಲುವು ಯಾರಿಗೆ?

ಲೋಕಸಭಾ ಚುನಾವಣೆ ಮತದಾನಕ್ಕೆ ಇನ್ನು ಕೇವಲ 3 ಬಾಕಿ ಇರುವಂತೆ ಬಿಡುಗಡೆಯಾಗಿರುವ ಟೈಮ್ಸ್ ನೌ-ವಿಎಂಆರ್ ಸಮೀಕ್ಷೆಯಲ್ಲಿ ಕರ್ನಾಟಕದ ಒಟ್ಟು 28 ಕ್ಷೇತ್ರಗಳ ಪೈಕಿ ಬಿಜೆಪಿ 16 ಸ್ಥಾನಗಳಿಸುವ ಸಾಧ್ಯತೆ ಇದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ 12 ಸ್ಥಾನ ಗಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಲೋಕಸಭಾ ಚುನಾವಣೆ ಮತದಾನಕ್ಕೆ ಇನ್ನು ಕೇವಲ 3 ಬಾಕಿ ಇರುವಂತೆ ಬಿಡುಗಡೆಯಾಗಿರುವ ಟೈಮ್ಸ್ ನೌ-ವಿಎಂಆರ್ ಸಮೀಕ್ಷೆಯಲ್ಲಿ ಕರ್ನಾಟಕದ ಒಟ್ಟು 28 ಕ್ಷೇತ್ರಗಳ ಪೈಕಿ ಬಿಜೆಪಿ 16 ಸ್ಥಾನಗಳಿಸುವ ಸಾಧ್ಯತೆ ಇದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ 12 ಸ್ಥಾನ ಗಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವಲ್ಲಿ ಯಶಸ್ವಿಯಾದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಲೋಕಸಭಾ ಚುನವಾಣೆಯಲ್ಲಿ ಮ್ಯಾಜಿಕ್ ಮಾಡುವಲ್ಲಿ ಯಶಸ್ವಿಯಾಗದಿದ್ದರೂ, ಬಿಜೆಪಿ ಮತ ಪ್ರಮಾಣ ಕಡಿತಗೊಳಿಸುವಲ್ಲಿ ಅಲ್ಪ ಪ್ರಮಾಣದ ಯಶಸ್ಸು ಕಂಡಿದೆ ಎಂದು ಹೇಳಲಾಗಿದೆ. ಆದರೆ ಮೈತ್ರಿಕೂಟದ ಪರಿಶ್ರಮಕ್ಕೂ ಫಲಿತಾಂಶಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಹೇಳಲಾಗಿದೆ.
ಕರ್ನಾಟಕದಲ್ಲಿ ಬಿಜೆಪಿಗೆ 16, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ 12 ಸ್ಥಾನ
ಇನ್ನು ಕರ್ನಾಟಕದ 28 ಕ್ಷೇತ್ರಗಳಲ್ಲಿ ನಡೆಸಿದ ಸಮೀಕ್ಷೆಯ ಫಲಿತಾಂಶವೂ ಪ್ರಕಟಗೊಂಡಿದ್ದು, ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು 23ರಂದು ಲೋಕಸಭಾ ಚುನಾವಣೆ ನಡೆಯುತ್ತಿದೆ. ಮಾರ್ಚ್ ತಿಂಗಳಿನಲ್ಲಿ ಸಹ ರಾಜ್ಯದಲ್ಲಿ ಸಮೀಕ್ಷೆ ನಡೆಸಿ ಟೈಮ್ಸ್ ನೌ ಮತ್ತು ವಿಎಂಆರ್ ವರದಿ ಬಿಡುಗಡೆ ಮಾಡಿತ್ತು. ರಾಜ್ಯದ 28 ಕ್ಷೇತ್ರಗಳ ಪೈಕಿ ಬಿಜೆಪಿ 27 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ಘೋಷಣೆ ಮಾಡಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು 21ರಲ್ಲಿ ಕಾಂಗ್ರೆಸ್, 7 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣದಲ್ಲಿದ್ದಾರೆ...
ಯಾರಿಗೆ ಎಷ್ಟು ಸೀಟು?
ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ಕರ್ನಾಟಕದ 28 ಕ್ಷೇತ್ರಗಳ ಪೈಕಿ ಬಿಜೆಪಿ 16 ಮತ್ತು ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ 12 ಸ್ಥಾನಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ. ಇತರ ಯಾವುದೇ ಪಕ್ಷದ ಅಭ್ಯರ್ಥಿಗಳು ಜಯಗಳಿಸುವುದಿಲ್ಲ ಎನ್ನಲಾಗಿದೆ. 2014ರ ಚುನಾವಣೆ ಫಲಿತಾಂಶಕ್ಕೆ ಹೋಲಿಕೆ ಮಾಡಿದರೆ ಬಿಜೆಪಿಗೆ 1 ಸ್ಥಾನ ಕಡಿಮೆ ಬರಲಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ 1 ಸ್ಥಾನ ಹೆಚ್ಚಿಗೆ ಗಳಿಸಲಿದೆ. 2014ರಲ್ಲಿ ಬಿಜೆಪಿ 17, ಕಾಂಗ್ರೆಸ್ (9) + ಜೆಡಿಎಸ್ (2) ಸ್ಥಾನಗಳಲ್ಲಿ ಜಯಗಳಿಸಿದ್ದವು.
ಹಿಂದಿನ ಸಮೀಕ್ಷೆ ಫಲಿತಾಂಶ
ಫೆಬ್ರವರಿ ತಿಂಗಳಿನಲ್ಲಿ ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ 13 (ಕಾಂಗ್ರೆಸ್ 12, ಜೆಡಿಎಸ್ 1) ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ವರದಿ ಬಂದಿತ್ತು. ಬಿಜೆಪಿ 15 ಸ್ಥಾನದಲ್ಲಿ ಜಯಗಳಿಸಲಿದೆ ಎಂದು ಹೇಳಿತ್ತು. ಟೈಮ್ಸ್ ನೌ ಮತ್ತು ವಿಎಂಆರ್ ಸಮೀಕ್ಷೆ ಪ್ರಕಾರ ಬಿಜೆಪಿ 45.1ರಷ್ಟು. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ 43.4ರಷ್ಟು ಮತಗಳನ್ನು ಪಡೆಯಲಿವೆ. 2014ರಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸೇರಿ 51.8ರಷ್ಟು, ಬಿಜೆಪಿ 43ರಷ್ಟು ಮತಗಳನ್ನು ಪಡೆದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com