ಬಂಗಾರಪ್ಪ ಹಾದಿಯಲ್ಲಿ ಮಧು ಸಾಗುತ್ತಿದ್ದಾನೆ: ತಮ್ಮನ ಪರ ಪ್ರಚಾರದಲ್ಲಿ ಗೀತಾ ಶಿವರಾಜ್ ಕುಮಾರ್ ಹೇಳಿಕೆ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಜೆಡಿಎಸ್‍ನ ಮಧು ಬಂಗಾರಪ್ಪ ಪರವಾಗಿ ಅವರ ಸಹೋದರಿ ಗೀತಾ ಶಿವರಾಜ್ ಕುಮಾರ್ ಪ್ರಚಾರ ...
ಗೀತಾ ಶಿವರಾಜ್ ಕುಮಾರ್
ಗೀತಾ ಶಿವರಾಜ್ ಕುಮಾರ್
Updated on: 
ಶಿವಮೊಗ್ಗ:  ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಜೆಡಿಎಸ್‍ನ ಮಧು ಬಂಗಾರಪ್ಪ ಪರವಾಗಿ ಅವರ ಸಹೋದರಿ ಗೀತಾ ಶಿವರಾಜ್ ಕುಮಾರ್ ಪ್ರಚಾರ ಆರಂಭಿಸಿದ್ದಾರೆ.
ಕ್ಷೇತ್ರದಲ್ಲಿ ಮೂರು ದಿನಗಳ ಕಾಲ ಪ್ರಚಾರ  ಆರಂಭಿಸಿರುವ ಗೀತಾ , ಕೇಂದ್ರದ ಬಿಜೆಪಿ ಸರ್ಕಾರ ಈ ಹಿಂದೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.
ಈ ಬಾರಿ ಮೈತ್ರಿ ಸರ್ಕಾರದಿಂದ ಸಹೋದರ ಚುನಾವಣೆಗೆ ನಿಂತಿದ್ದಾರೆ. ಕಾಂಗ್ರೆಸ್ ಅವರು ಬೆಂಬಲ ನೀಡಿದ್ದು, ಗೆಲ್ಲುವ ವಿಶ್ವಾಸ ಇದೆ. ಕಳೆದ ವಿಧಾನಸಭಾ ಚುನಾವಣೆ ಅಲ್ಪ ಅಂತರದಲ್ಲಿ ಸೋಲುಂಟಾಗಿತ್ತು. 
ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿ ನೀಡಿದ್ದ ಆಶ್ವಾಸನೆ ಈಡೇರಿಸಿಲ್ಲ. ಮೈತ್ರಿ ಸರ್ಕಾರದ ಸಾಧನೆಯನ್ನು ಪ್ರಮುಖ ವಿಷಯವಾಗಿ ಪ್ರಚಾರ ಮಾಡಿ ಮತಯಾಚನೆ ಮಾಡುತ್ತೇನೆ. ತಂದೆ ಬಂಗಾರಪ್ಪನವರ ಕೊನೆಯ ಚುನಾವಣೆಯ ಸೋಲನ್ನು ಈ ಬಾರಿ ಗೆಲುವಾಗಿ ಪರಿವರ್ತನೆ ಮಾಡುತ್ತೇವೆ ಎಂದು ಹೇಳಿದರು.
ನನ್ನ ತಮ್ಮ ಮಧು ನನ್ನ ತಂದೆಯ ಹಾದಿಯಲ್ಲಿ ನಡೆಯುತ್ತಿದ್ದಾನೆ, 6 ಸಾವಿರ ಬಗರ್ ಹುಕುಂ ರೈತರಿಗೆ  ಜಮೀನು ಕೊಡಿಸಿದ್ದಾನೆ, ಜಿಲ್ಲೆಯ ನೀರಾವರಿ ಯೋಜನೆಗಳಿಗೆ 247 ಕೋಟಿ ರು.ಅನುದಾನ ಕೊಡಿಸಿದ್ದಾನೆ, ಜಿಲ್ಲೆಯ ಜನರ ಸೇವೆಯನ್ನು ಇನ್ನೂ ಹೆಚ್ಚು ಮಾಡಲು ಆತನನ್ನು ಸಂಸತ್ತಿಗೆ ಕಳುಹಿಸಬೇಕೆಂದು ಗೀತಾ ಶಿವರಾಜ್ ಕುಮಾರ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com