ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ

ದೇಶಪ್ರೇಮ, ಸೈನಿಕರ ಹೆಸರಿನಲ್ಲಿ ಮೋದಿ ರಾಜಕೀಯ - ಕುಮಾರಸ್ವಾಮಿ

ಸೈನಿಕರು, ದೇಶಪ್ರೇಮದ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಲಾಭ ಮಾಡಿಕೊಳ್ಳುವ ನಡೆ ಸರಿಯಲ್ಲ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
Published on

ಬೆಂಗಳೂರು: ಸೈನಿಕರು, ದೇಶಪ್ರೇಮದ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಲಾಭ ಮಾಡಿಕೊಳ್ಳುವ ನಡೆ ಸರಿಯಲ್ಲ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕೊಪ್ಪಳದ ಗಂಗಾವತಿಯಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ , ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಕಿಡಿಕಾರಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಬಿಜೆಪಿ ಸರ್ಕಾರದ ಹೇಳಿಕೊಳ್ಳುವ ಸಾಧನೆ ಏನೂ ಇಲ್ಲದ ಕಾರಣ ಇಂತಹ ಭಾವಾನಾತ್ಮಾಕ ವಿಷಯಗಳ ಮೊರೆ ಹೋಗಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿಯ ಕುತಂತ್ರಿ ಪೋಸ್ಟ್ ಗೆ ಈಗಾಗಲೇ ಸ್ಪಷ್ಟನೆ ನೀಡಲಾಗಿದೆ. ಆದರೂ ಪ್ರಧಾನಿ ಮೋದಿ  ತಪ್ಪು ಮಾಹಿತಿಗಳನ್ನೇ ನೆಚ್ಚಿಕೊಂಡಿರುವುದು ವಿಷಾದನೀಯ ಸಂಗತಿಯಾಗಿದೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೈನಿಕರ ಜೀವನ ಜೊತೆಗೆ ಚೆಲ್ಲಾಟವಾಡಬಾರದು, ನಾನೆಂದೂ ಊಟಕ್ಕಾಗಿ ಬಡವರು ಸೇನೆ ಸೇರುತ್ತಾರೆ ಎಂದು ಹೇಳಿಲ್ಲ ಎಂದು ಕುಮಾರಸ್ವಾಮಿ ಟ್ವೀಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com