ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂಪಾಯಿ ಹಣ ಹಾಕುತ್ತೇನೆ ಎಂದಿದ್ದರು. ಆದರೆ, ಗೆದ್ದ ಬಳಿಕ ಹೇಳಿದಂತೆ ನಡೆದುಕೊಳ್ಳಲಿಲ್ಲ, ನೋಟ್ ರದ್ದತಿ ಮೂಲಕ ಬಡವರು, ದುರ್ಬಲರು, ಸಣ್ಣ ವ್ಯಾಪಾರಿಗಳನ್ನು ಬೀದಿಗೆ ತಳ್ಳಿದರು ಎಂದು ಆರೋಪಿಸಿದರು.