
ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಖಿಲ್ ಎಲ್ಲಿದ್ದೀಯಪ್ಪ ಎಂದು ಟ್ರೋಲ್ ಮಾಡಲಾಗುತ್ತಿತ್ತು. ಇದೀಗ ನಿಖಿಲ್ ಎಲ್ಲಿದ್ದೀಯಪ್ಪ ಟ್ರೋಲ್‌ಗೆ ಸ್ವತಃ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ.
ಕೆಆರ್ ನಗರದ ನಾರಾಯಣಪುರ ಗ್ರಾಮದಲ್ಲಿರುವ ಯುವಕರ ಬಳಿ ಸಿಎಂ ಕುಮಾರಸ್ವಾಮಿ ಅವರು ಈ ಬಗ್ಗೆ ಮಾತನಾಡಿದ್ದು ಇತ್ತೀಚಿನ ದಿನಗಳಲ್ಲಿ ಒಂದು ತಂಡ ಇದೆ. ಕೆಟ್ಟ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ. ಈ ರೀತಿಯ ಕೆಟ್ಟ ಅಭಿರುಚಿ ಇಟ್ಟುಕೊಂಡು ಸಮಾಜವನ್ನು ಹಾಳು ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ನಾವು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಸಿಎಂ ಹೇಳಿದರು.
ಇನ್ನು ಮುಂದೆ ನಿಖಿಲ್ ಎಲ್ಲಿದ್ದೀಯಪ್ಪ ಎಂದು ಯಾರಾದರೂ ಕೇಳಿದರೆ ಅದಕ್ಕೆ ನೀವೂ ನಿಖಿಲ್ ನಮ್ಮ ಹೃದಯದಲ್ಲಿ ಇದ್ದಾನೆ ಎನ್ನಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು.
ಜಾಗ್ವಾರ್ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಕುಮಾರಸ್ವಾಮಿ ಅವರು ನಿಖಿಲ್ ಅವರನ್ನು ಉಲ್ಲೇಖಿಸಿ ನಿಖಿಲ್ ಎಲ್ಲಿದ್ದೀಯಪ್ಪ ಎಂದು ಕೇಳಿದ್ದರು. ಈ ಬಳಿಕ ಈ ಡೈಲಾಗ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
Advertisement