ವಿವಿಧ ಕಂಪೆನಿಗಳಲ್ಲಿ ಪ್ರಜ್ವಲ್ ರೇವಣ್ಣ ಪಾಲುದಾರಿಕೆ ಹೊಂದಿದ್ದಾರೆ. ಆದರೆ, ನಾಮಪತ್ರ ಸಲ್ಲಿಕೆ ವೇಳೆ ನೀಡಿದ ಆಸ್ತಿ ವಿವರಗಳಲ್ಲಿ ಇದರ ಬಗ್ಗೆ ಮಾಹಿತಿ ಒದಗಿಸಿಲ್ಲ ಎಂದು ಆರೋಪಿಸಲಾಗಿದೆ. ಇದಕ್ಕೂ ಮೊದಲು ಬಿಜೆಪಿ ಅಭ್ಯರ್ಥಿ ಎ. ಮಂಜು ಕೂಡ ಪ್ರಜ್ವಲ್ ಅವರ ಆಸ್ತಿ ವಿವರದ ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದ್ದರು. ಪ್ರಜ್ವಲ್ ಅವರು ಎರಡು ಖಾಸಗಿ ಕಂಪೆನಿಗಳಲ್ಲಿ ಷೇರುಗಳನ್ನು ಹೊಂದಿದ್ದು, ಅವುಗಳ ಕುರಿತು ಆಸ್ತಿ ವಿವರದಲ್ಲಿ ಉಲ್ಲೇಖಿಸದೆ ಆಯೋಗವನ್ನು ವಂಚಿಸಿದ್ದಾರೆ. ಹೀಗಾಗಿ ಅವರ ನಾಮಪತ್ರ ತಿರಸ್ಕರಿಸಬೇಕು ಎಂದು ಎ ಮಂಜು ಆಗ್ರಹಿಸಿದ್ದರು.