ಬಿಜೆಪಿ ಅಭ್ಯರ್ಥಿ ಉಮೇಶ್‌ ಜಾದವ್‌ ಕಾರಿನ ಮೇಲೆ ಉದ್ರಿಕ್ತ ಗುಂಪಿನಿಂದ ದಾಳಿಗೆ ಯತ್ನ: ಲಾಠಿ ಚಾರ್ಜ್

ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾದವ್‌ ಅವರಿದ್ದ ಕಾರಿನ ಮೇಲೆ ದಾಳಿ ನಡೆಸಲು ಯತ್ನಿಸಿದ ಉದ್ರಿಕ್ತರ ಗುಂಪನ್ನು ಪೊಲೀಸರು ಲಾಠಿ ಪ್ರಹಾರ ನಡೆಸಿ ಚದುರಿಸಿದ್ದಾರೆ.
ಉಮೇಶ್ ಜಾದವ್
ಉಮೇಶ್ ಜಾದವ್
Updated on: 
ಕಲಬುರಗಿ: ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾದವ್‌ ಅವರಿದ್ದ ಕಾರಿನ ಮೇಲೆ ದಾಳಿ ನಡೆಸಲು ಯತ್ನಿಸಿದ ಉದ್ರಿಕ್ತರ ಗುಂಪನ್ನು ಪೊಲೀಸರು ಲಾಠಿ ಪ್ರಹಾರ ನಡೆಸಿ ಚದುರಿಸಿದ್ದಾರೆ. 
ಚಿಂಚೋಳಿಯಲ್ಲಿ ಮತ ಚಲಾಯಿಸಿ ಕಲಬುರಗಿಗೆ ವಾಪಸ್ಸಾಗುತ್ತಿದ್ದ ವೇಳೆ ಸುಮಾರು 10ರಿಂದ 15 ಜನರಿದ್ದ ಯುವಕರ ಗುಂಪು ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಕಾರ್‌ ಗೆ ತಡೆ ಒಡ್ಡಿ ಕಲ್ಲು ತೂರಾಟ ನಡೆಸಿದೆ. ಘಟನೆಯಲ್ಲಿ ಯಾರೊಬ್ಬರೂ ಗಾಯಗೊಂಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. 
ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿ ಉದ್ರಿಕ್ತ ಗುಂಪನ್ನು ಚದುರಿಸಿದ್ದಾರೆ. ದಾಳಿ ಸಂಬಂಧ ಇದುವರೆಗೆ ಯಾರನ್ನೂ ಬಂಧಿಸಿಲ್ಲ. ಇತ್ತೀಚೆಗೆ ಕಾಂಗ್ರೆಸ್‌ ತೊರೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದ ಜಾದವ್‌, ಬಿಜೆಪಿ ಅಭ್ಯರ್ಥಿಯಾಗಿ ಕಲಬುರಗಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಜಿದ್ದಾಜಿದ್ದಿನ ಕಣದಲ್ಲಿ ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ಹಾಲಿ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎದುರಾಳಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com