ಮಂಡ್ಯದಲ್ಲಿ ನಿಖಿಲ್ ಸೋಲಿನ ಭೀತಿ: ಮೂವರು ಜೆಡಿಎಸ್ ಶಾಸಕರಿಗೆ ಮುಖ್ಯಮಂತ್ರಿ ತರಾಟೆ

ಮಂಡ್ಯದ ಲೋಕಸಭಾ ಕ್ಷೇತ್ರದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಹಿನ್ನಡೆಯಾಗಬಹುದೆಂಬ ಗುಪ್ತಚರ ವರದಿಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಮೂವರು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು:ಲೋಕಸಭಾ ಚುನಾವಣೆಯಿಂದಾಗಿ ರಾಷ್ಟ್ರದ ಗಮನ ಸೆಳೆದಿರುವ ಮಂಡ್ಯದ ಲೋಕಸಭಾ ಕ್ಷೇತ್ರದ  ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಹಿನ್ನಡೆಯಾಗಬಹುದೆಂಬ ಗುಪ್ತಚರ ವರದಿಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಮೂವರು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಮಂಡ್ಯ ನಗರ, ಮಳವಳ್ಳಿ ಹಾಗೂ ಮದ್ದೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಹಿನ್ನಡೆಯಾಗಬಹುದೆಂದು ಗುಪ್ತಚರ ಇಲಾಖೆ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದೆ.
ಈ ವರದಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಕ್ಷೇತ್ರಗಳ ಜೆಡಿಎಸ್ ಶಾಸಕರಾದ ಎಂ. ಶ್ರೀನಿವಾಸ್, ಅನ್ನದಾನಿ ಹಾಗೂ ತಮ್ಮಣ್ಮ ಅವರೊಂದಿಗೆ  ದೂರವಾಣಿಯಲ್ಲಿ ಮಾತನಾಡಿ, ಏನಾದರೂ ನಿಖಿಲ್ ಕುಮಾರಸ್ವಾಮಿಗೆ ಹಿನ್ನಡೆಯಾದರೆ ನೀವೆ ಜವಾಬ್ದಾರಿ ಹೊಣೆ ಹೊರಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಈ ಮೂರು ಕ್ಷೇತ್ರಗಳಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಹಾಗಾಗಿ ಹಿನ್ನಡೆಯಾಗಬಹುದೆಂಬ ಅಂಶವೂ ಗುಪ್ತಚರ ವರದಿಯಲ್ಲಿದ್ದು, ಈ ಬಗ್ಗೆಯೂ ಕುಮಾರಸ್ವಾಮಿ ಮೂವರು ಶಾಸಕರ ವಿರುದ್ಧ ಕಿಡಿಕಾರಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಷ್ಟ್ರದ ಗಮನ ಸೆಳೆದಿದ್ದು, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪ್ರತಿಷ್ಠೆಯ ಪ್ರಶ್ನೆಯಾಗಿದೆ.ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರ ಜಿದ್ದಾಜಿದ್ದಿನ ಹೋರಾಟವೇ ಏರ್ಪಟ್ಟಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com