ಮುದ್ದಹನುಮೇಗೌಡ ಬಂಡಾಯ ಜೆಡಿಸ್‍ಗೆ ಸಂಬಂಧಿಸಿಲ್ಲ: ಕುಮಾರಸ್ವಾಮಿ

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಸಂಸದ ಮುದ್ದ ಹನುಮೇಗೌಡ ಘೋಷಿಸಿದ್ದು, ಮೈತ್ರಿ ಪಕ್ಷಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ
Updated on: 

ಬೆಂಗಳೂರು:ತುಮಕೂರು ಲೋಕಸಭಾ ಕ್ಷೇತ್ರದಲ್ಲಿ  ಕಾಂಗ್ರೆಸ್ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಸಂಸದ ಮುದ್ದ ಹನುಮೇಗೌಡ  ಘೋಷಿಸಿದ್ದು, ಮೈತ್ರಿ ಪಕ್ಷಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಸಂಸದ ಮುದ್ದಹನುಮೇಗೌಡ ಅವರ ನಿರ್ಧಾರ ತಮಗೆ ಸಂಬಂಧಿಸಿದ್ದಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸೂತ್ರದಂತೆ ಕಾಂಗ್ರೆಸ್ ಪಕ್ಷ ಜೆಡಿಎಸ್‍ಗೆ 8 ಕ್ಷೇತ್ರಗಳನ್ನು ಹಂಚಿಕೆ ಮಾಡಿದೆ.ಮುದ್ದಹನುಮೇಗೌಡ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟ ವಿಚಾರ ಎಂದು ಅವರು ಸ್ಪಷ್ಟಪಡಿಸಿದರು.

ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಪರ ಜಿಲ್ಲಾ ಕಾಂಗ್ರೆಸ್‍ನ ಕೆಲ ನಾಯಕರು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಈಗಾಗಲೇ ಸ್ಪಷ್ಟಪಡಿಸಿದಂತೆ ಮಗ ನಿಖಿಲ್ ಪರ ಪ್ರಚಾರ ಮಾಡುವಂತೆ ತಾವು ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ. ಸ್ವಾಭಿಮಾನಕ್ಕೆ ಧಕ್ಕೆಯಾಗುವಂತಹ ಕೆಲಸ ಮಾಡುವುದಿಲ್ಲ ಎಂದರು.
ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಶಕ್ತಿಯಿದ್ದು, ಕಾರ್ಯಕರ್ತರು ನಿಖಿಲ್ ಗೆಲುವಿಗೆ ಸಹಕರಿಸಲಿದ್ದಾರೆ.ನಾವು ನಮ್ಮ ಕೆಲಸ ಮಾಡುತ್ತೇವೆ, ಕಾಂಗ್ರೆಸ್‍ನವರು ತಮ್ಮ ಕೆಲಸ ಮಾಡಲಿ ಎಂದು  ಕುಮಾರಸ್ವಾಮಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com