

ಮಂಡ್ಯ: ವರಿಷ್ಠರ ಶಿಸ್ತು ಕ್ರಮದ ಎಚ್ಚರಿಕೆಗೆ ಸೆಡ್ಡು ಹೊಡೆದಿರುವ ಮಂಡ್ಯ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಸಾಮೂಹಿಕ ರಾಜೀನಾಮೆಗೆ ನಿರ್ಧರಿಸಿದ್ದು,ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರ ಪೂರ್ಣ ಪ್ರಮಾಣದ ಪ್ರಚಾರಕ್ಕಿಳಿಯುವುದಾಗಿ ಘೋಷಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರ ಪ್ರಚಾರದಲ್ಲಿ ತೊಡಗುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪಕ್ಷದ ವರಿಷ್ಠರು ನೀಡಿದ್ದ ಶಿಸ್ತು ಕ್ರಮದ ಎಚ್ಚರಿಕೆಗೆ ಸೆಡ್ಡು ಹೊಡೆದಿರುವ ಮಂಡ್ಯ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆಯ ನಿರ್ಧಾರ ಕೈಗೊಂಡಿದ್ದಾರೆ.