ದರ್ಶನ್ ಮನೆ ಮೇಲೆ ಕಲ್ಲು ತೂರಾಟ,ಯಶ್ ಮನೆಗೂ ಭದ್ರತೆ

ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ಬೆಂಬಲಕ್ಕೆ ನಿಂತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಹಿನ್ನೆಲೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಮನೆಗೂ ಭದ್ರತೆ ಒದಗಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ  ಬೆಂಬಲಕ್ಕೆ ನಿಂತಿರುವ  ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಹಿನ್ನೆಲೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಮನೆಗೂ ಭದ್ರತೆ ಒದಗಿಸಲಾಗಿದೆ.

ಹೊಸಕೇರೆ ಹಳ್ಳಿಯಲ್ಲಿರುವ  ಯಶ್ ಮನೆಗೆ ಇಬ್ಬರು ಪೊಲೀಸರನ್ನು ನಿಯೋಜಿಸಲಾಗಿದೆ.ಈ  ಮೂಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಮುಂಜಾನೆ  ಸುಮಾರು 3-30 ರ ಸುಮಾರಿನಲ್ಲಿ  ಕಿಡಿಗೇಡಿಗಳು ರಾಜರಾಜೇಶ್ವರಿನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ದರ್ಶನ್ ಅವರ  ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿ, ಕಾರಿನ ಗಾಜುಗಳನ್ನು ಜಖಂಗೊಳಿಸಿದ್ದರು.

ಕಲ್ಲು ತೂರಾಟ ನಡೆದ ಸಂದರ್ಭದಲ್ಲಿ ದರ್ಶನ್ ಹೈದ್ರಾಬಾದ್ ನಲ್ಲಿ ಇದುದ್ದರಿಂದ ಅವರಿಗೆ  ಈ ಘಟನೆ ಬಗ್ಗೆ ಮಾಹಿತಿ ಇಲ್ಲ. ಆರೋಪಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ  ನಡೆಸಿಲಾಗುತ್ತಿರುವುದಾಗಿ  ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com