ಬಿಜೆಪಿ ಭೇಷರತ್ ಬೆಂಬಲಕ್ಕೆ ಋಣಿಯಾಗಿದ್ದೇನೆ: ಯಡಿಯೂರಪ್ಪ ಭೇಟಿ ಬಳಿಕ ಸುಮಲತಾ ಹೇಳಿಕೆ

ಮಂಡ್ಯ ಲೋಕಸಭೆ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸಿರುವ ತಮಗೆ ಭೇಷರತ್ ಬೆಂಬಲ ನೀಡುವುದಾಗಿ ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ...
ಸುಮಲತಾ ಅಂಬರೀಷ್ ಮತ್ತು ಯಡಿಯೂರಪ್ಪ
ಸುಮಲತಾ ಅಂಬರೀಷ್ ಮತ್ತು ಯಡಿಯೂರಪ್ಪ
Updated on: 
ಬೆಂಗಳೂರು:  ಮಂಡ್ಯ ಲೋಕಸಭೆ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸಿರುವ ತಮಗೆ ಭೇಷರತ್ ಬೆಂಬಲ ನೀಡುವುದಾಗಿ ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರಿಗೆ ತಾವು ಋಣಿಯಾಗಿರುವುದಾಗಿ ನಟಿ ಸುಮಲತಾ ಅಂಬರೀಷ್ ಹೇಳಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರು ಮನೆಗೆ  ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಭೇಟಿ ನೀಡಿದ್ದರು. ಭೇಟಿ  ನಂತರ ಸುದ್ದಿಗಾರೊರಂದಿಗೆ ಮಾತನಾಡಿದ ಅವರು, ತಮ್ಮ ಪರ ಮಂಡ್ಯದಲ್ಲಿ ಪ್ರಚಾರಕ್ಕೆ ಬರಬೇಕೆಂದು ಮನವಿ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ,  
ತಮಗೆ ಬೆಂಬಲ ನೀಡಿರುವ ಯಡಿಯೂರಪ್ಪ ಅವರಿಗೆ ಧನ್ಯವಾದ ಹೇಳಲು ಬಂದಿದ್ದೇನೆ ಎಂದು ಹೇಳಿದರು. ಇನ್ನೂ ಸುಮಲತಾ ಅವರ ಪರವಾಗಿ ಪ್ರಚಾರಕ್ಕಿಳಿದಿರುವ ಯಶ್ ಮತ್ತು ದರ್ಶನ್ ವಿರುದ್ಧ  ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಕಳ್ಳೆತ್ತು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸುಮಲತಾ ಎಲೆಕ್ಷನ್ ಸಮಯದಲ್ಲಿ ಇಂತ ಮಾತುಗಳು ಅವಶ್ಯಕತೆಯಿಲ್ಲ, ನಾವು ಇದಕ್ಕೆ ಪ್ರತಿಕ್ರಿಯೆ ನೀಡದಿರಲು ನಿರ್ಧರಿಸಿದ್ದು, ದರ್ಶನ್ ಕೂಡ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಮಂಡ್ಯದಲ್ಲಿ ಗೆದ್ದ ನಂತರ ಬಿಜೆಪಿ ಸೇರುತ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಗೆದ್ದ ನಂತರ ಮಂಡ್ಯ ಜನ ಅಭಿಪ್ರಾಯದಂತೆ ಮುಂದುವರೆಯುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com