ಹೆಚ್ . ಸಿ. ಮಹದೇವಪ್ಪ ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ- ಸಿದ್ದರಾಮಯ್ಯ

ಮಾಜಿ ಸಚಿವ ಎಚ್. ಸಿ. ಮಹದೇವಪ್ಪ ಅವರೊಂದಿಗೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ ಎಂದು ಸಂಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ, ಹೆಚ್ ಸಿ ಮಹದೇವಪ್ಪ
ಸಿದ್ದರಾಮಯ್ಯ, ಹೆಚ್ ಸಿ ಮಹದೇವಪ್ಪ
Updated on

ಮೈಸೂರು: ಮಾಜಿ ಸಚಿವ ಎಚ್. ಸಿ. ಮಹದೇವಪ್ಪ ಅವರೊಂದಿಗೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ ಎಂದು ಸಂಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ತಮ್ಮ ನಿವಾಸದಲ್ಲಿಂದು ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮಾತನಾಡಿದ ಸಿದ್ದರಾಮಯ್ಯ,ಮಹದೇವಪ್ಪ ಜೊತೆಗೆ ಧೀರ್ಘ ಕಾಲಿನ ಸ್ನೇಹ ಸಂಬಂಧವಿದೆ.ನಮ್ಮಿಬ್ಬರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ,  ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯ ಹುಟ್ಟು ಹಾಕಲು ಪ್ರಯತ್ನ ಮಾಡುವವರು ಮೂರ್ಖರು ಎಂದರು.

ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡಬೇಕೆಂದು ಕಾಂಗಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು. ಹಿಂದಿನ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಮತಯಾಚಿಸುವಂತೆ ಅವರು ಹೇಳಿದರು.
ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮಾಡಿರುವ ಸಾಧನೆಗಳನ್ನು ಜನರಿಗೆ ತಿಳಿಸಿ ಮತ ಯಾಚಿಸುವಂತೆ ಸಿದ್ದರಾಮಯ್ಯ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com