ಜೆಡಿಎಸ್ 2ನೇ ಪಟ್ಟಿ ಪ್ರಕಟ: ಉತ್ತರ ಕನ್ನಡದಿಂದ ಮೈತ್ರಿ ಅಭ್ಯರ್ಥಿಯಾಗಿ ಆನಂದ್ ಅಸ್ನೋಟಿಕರ್

ಲೋಕಸಭಾ ಚುನಾವಣೆಗೆ ಕರ್ನಾಟಕ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಜೆಡಿಎಸ್ ...
ಆನಂದ್ ಆಸ್ನೋಟಿಕರ್
ಆನಂದ್ ಆಸ್ನೋಟಿಕರ್
ಬೆಂಗಳೂರು: ಲೋಕಸಭಾ ಚುನಾವಣೆಗೆ ಕರ್ನಾಟಕ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಚುನಾವಣೆಯನ್ನು ಎದುರಿಸುತ್ತಿದೆ.
ಮಂಗಳವಾರ ಜೆಡಿಎಸ್‌ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಚುನಾವಣೆ ಎದುರಿಸುತ್ತಿದೆ. ಕಾಂಗ್ರೆಸ್ 21 ಕ್ಷೇತ್ರಗಳಲ್ಲಿ, ಜೆಡಿಎಸ್ 7 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ.
ಉತ್ತರ ಕನ್ನಡ ಕ್ಷೇತ್ರದಿಂದ ಆನಂದ್ ಆಸ್ನೋಟಿಕರ್ ಅವರು ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಆನಂದ್ ಆಸ್ನೋಟಿಕರ್ ಅವರನ್ನು ಲೋಕಸಭಾ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಹೆಗಡೆ ವಿರುದ್ಧ ಕಣಕ್ಕಿಳಿದಿದ್ದಾರೆ.
ಬಿಜಾಪುರ ಕ್ಷೇತ್ರದಿಂದ ಸುನೀತಾ ದೇವಾನಂದ್ ಚವಾಣ್, ಇಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಿಗಜಿಣಗಿ ಸ್ಪರ್ಧಿಸುತ್ತಿದ್ದಾರೆ, ಕಾಂಗ್ರೆಸ್ ನಾಯಕ ಮಾಜಿ ಶಾಸಕ ರಾಜು ಅಲ್ಗೂರ್ ಅವರಿಗೆ ಜೆಡಿಎಸ್ ಟಿಕೆಟ್ ನೀಡುವುದಾಗಿ ಆಫರ್ ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ,
ಉತ್ತರ ಕನ್ನಡ, ಬಿಜಾಪುರ, ತುಮಕೂರು, ಹಾಸನ, ಮಂಡ್ಯ, ಶಿವಮೊಗ್ಗ. ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳನ್ನು ಜೆಡಿಎಸ್ ಬಿಟ್ಟುಕೊಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com