ಮಂಡ್ಯದಲ್ಲಿ ಸುಮಲತಾ ಪರ ಪ್ರಚಾರ ಮಾಡುತ್ತೇನೆ: ಬಿ.ಎಸ್ ಯಡಿಯೂರಪ್ಪ

ಮಂಡ್ಯ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಟಿ ಸುಮಲತಾ ಅಂಬರೀಷ್ ಪರವಾಗಿ ತಾವು ಪ್ರಚಾರದಲ್ಲಿ ಪಾಲ್ಗೋಳ್ಳುವುದಾಗಿ ಬಿಜೆಪಿ ...
ಯಡಿಯೂರಪ್ಪ
ಯಡಿಯೂರಪ್ಪ
Updated on: 
ಚಿತ್ರದುರ್ಗ: ಮಂಡ್ಯ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಟಿ ಸುಮಲತಾ ಅಂಬರೀಷ್ ಪರವಾಗಿ ತಾವು ಪ್ರಚಾರದಲ್ಲಿ ಪಾಲ್ಗೋಳ್ಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಸುಮಲತಾ ಅವರ ಗೆಲುವು ಈಗಾಗಲೇ ನಿಶ್ಚಯವಾಗಿದೆ, ಸಮ್ಮಿಶ್ರ ಸರ್ಕಾರದ ಮೈತ್ರಿ ಪಕ್ಷಗಳು ರಾಜ್ಯಾದ್ಯಂತ ನೆಲ ಕಚ್ಚಲಿವೆ, ಸುಮಲತಾ ಅವರು ಅತ್ಯಧಿತ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ಭರವಸೆ ವ್ಯಕ್ತ ಪಡಿಸಿದರು. 
ಮಂಡ್ಯ, ಹಾಸನ ಮತ್ತು ತುಮಕೂರಿನಲ್ಲಿ ಜೆಡಿಎಸ್ ಕುಟುಂಬ ರಾಜಕೀಯಕ್ಕೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ., ಭೋವಿಯಲ್ಲಿ ಬಿಜೆಪಿ ವಿರುದ್ಧವಾಗಿ ನೋಟ ಚಲಾವಣೆ ಸಂಬಂಧ ಮಾತನಾಡಿದ ಅವರು, ಸಮಸ್ಯೆ ಬಗೆಹರಿಸಲಿದ್ದು ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಲಿದ್ದಾರೆ, ಕರ್ನಾಟಕದಲ್ಲಿ ಬಿಜೆಪಿ 22 ಕ್ಷೇತ್ರ ಗೆಲಲ್ಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com