ಕರ್ನಾಟಕ

ಬಿಜೆಪಿ ವಿಶ್ವದಲ್ಲೇ ಅತ್ಯಂತ ಹೇಡಿ ಪಕ್ಷ: ಐಟಿ ದಾಳಿ ಕುರಿತು ಸಿದ್ದರಾಮಯ್ಯ ಟ್ವೀಟ್

ಬಿಜೆಪಿ ವಿಶ್ವದಲ್ಲೇ ಅತ್ಯಂತ ಹೇಡಿ ಪಕ್ಷ: ಐಟಿ ದಾಳಿ ಕುರಿತು ಸಿದ್ದರಾಮಯ್ಯ ಟ್ವೀಟ್
ಪ್ರಧಾನಿ ಮೋದಿ, ಸಿದ್ದರಾಮಯ್ಯ
Published On :

ಬೆಂಗಳೂರು: ಲೋಕಸಭಾ ಚುನಾವಣೆಗೆ ಕೆಲ ದಿನಗಳ ಬಾಕಿ ಇರುವಂತೆಯೇ ಮೈಸೂರು, ಮಂಡ್ಯ ಹಾಗೂ ಬೆಂಗಳೂರಿನಲ್ಲಿ ಜೆಡಿಎಸ್ ಬೆಂಬಲಿಗರು ಹಾಗೂ ಕೆಲ ಉದ್ಯಮಿಗಳ ಮನೆ ಮೇಲೆ  ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿರುವುದಕ್ಕೆ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣೆಯ ಸಂದರ್ಭದಲ್ಲಿ  ಪ್ರತಿಪಕ್ಷಗಳ ನಾಯಕರ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿರುವುದು ಅವರ ಬೆಂಬಲಿಗರನ್ನು ಬೆದರಿಸುವ ಯತ್ನವಾಗಿದೆ ಎಂದು ಅವರು ಹೇಳಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆ ಪ್ರಜಾಪ್ರಭುತ್ವ ಹಾಗೂ ನಿರಂಕುಶ ಆಡಳಿತ ನಡುವಿನ ಹೋರಾಟ ಎಂಬುದನ್ನು ಈಗಾಗಲೇ ಹೇಳಿದ್ದು, ಬಿಜೆಪಿ ವಿಶ್ವದಲ್ಲೇ ಅತ್ಯಂತ ಪುಕ್ಕಲು ಪಕ್ಷವಾಗಿದೆ. ಅವರಿಗೆ ನಾಚಿಕೆಯಾಗಬೇಕು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಮೈಸೂರಿನ ವಿಜಯನಗರದಲ್ಲಿರುವ ಪುಟ್ಟರಾಜು ಅಣ್ಣನ ಮಗ ಅಶೋಕ್ ಮನೆ ಮೇಲೆಯೂ ದಾಳಿ ನಡೆದಿದೆ. ನಸುಕಿನ ಜಾವದಿಂದ ಪುಟ್ಟರಾಜು ನಿವಾಸ, ಸಂಬಂಧಿಗಳ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.