ಇನ್ನೊಬ್ಬರಿಂದ ಹಣ ಪಡೆದು ಮಜಾ ಮಾಡುತ್ತಾರೆ, ಬಣ್ಣದವರ ಆಟ ಹೆಚ್ಚು ದಿನ ನಡೆಯದು: ಸುಮಲತಾಗೆ ಸಿಎಂ ಟಾಂಗ್

ಜಿಲ್ಲೆಯ ಅಭಿವೃದ್ಧಿಗೆ ಜೆಡಿಎಸ್ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ, ಜನರ ಕಷ್ಟಗಳಿಗೆ ಸ್ಪಂದಿಸಿದೆ. ಆದರೆ ...
ಮಂಡ್ಯದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಜಿ ಮಾದೇಗೌಡರನ್ನು ಭೇಟಿ ಮಾಡಿ ಬೆಂಬಲ ಕೋರಿದ ಸಿಎಂ ಕುಮಾರಸ್ವಾಮಿ
ಮಂಡ್ಯದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಜಿ ಮಾದೇಗೌಡರನ್ನು ಭೇಟಿ ಮಾಡಿ ಬೆಂಬಲ ಕೋರಿದ ಸಿಎಂ ಕುಮಾರಸ್ವಾಮಿ
Updated on: 
ಮಂಡ್ಯ: ಜಿಲ್ಲೆಯ ಅಭಿವೃದ್ಧಿಗೆ ಜೆಡಿಎಸ್ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ, ಜನರ ಕಷ್ಟಗಳಿಗೆ ಸ್ಪಂದಿಸಿದೆ. ಆದರೆ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಏನು ಮಾಡಿದ್ದಾರೆ, ಬಣ್ಣದ ಲೋಕದಿಂದ ನೇರವಾಗಿ ಬಂದು ಇದೀಗ ಜನರ ಉದ್ಧಾರದ ಬಗ್ಗೆ ಮಾತನಾಡುತ್ತಾರೆ. ಅವರಿಗೇನು ಗೊತ್ತಿದೆ ದುಡಿಮೆ, ಜನರ ಕಷ್ಟಗಳು, ಬಣ್ಣದವರ ಆಟ ಹೆಚ್ಚು ದಿನ ನಡೆಯುವುದಿಲ್ಲ ಎಂದು ಸಿಎಂ ಕುಟುಕಿದ್ದಾರೆ.
ಸಿಎಂ ಕುಮಾರಸ್ವಾಮಿ ನಿನ್ನೆ ಮಂಡ್ಯದ ಹಿರಿಯ ಕಾಂಗ್ರೆಸ್​​ ನಾಯಕ ಮಾದೇಗೌಡರ ನಿವಾಸಕ್ಕೆ ಭೇಟಿ ನೀಡಿ ಕಾಂಗ್ರೆಸ್​​​-ಜೆಡಿಎಸ್​​ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಿಖಿಲ್​​​ಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ಜತೆಗೆ ಚುನಾವಣೆ ಗೆಲ್ಲಲು ಹೇಗೆ ಕಾರ್ಯತಂತ್ರ ರೂಪಿಸಬೇಕು ಎಂಬುದರ ಸುತ್ತ ಹಿರಿಯ ಮುತ್ಸದ್ದಿ ಮಾದೇಗೌಡರ ಬಳಿ ಸಿಎಂ ಸುದೀರ್ಘವಾಗಿ ಚರ್ಚಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಪಾಲಹಳ್ಳಿಯ ಭಾಷಣ ನೋಡಿದೆ. ಅವರ ಭಾಷಣದಲ್ಲಿ ಯಾವುದೇ ನೋವಿನ ಛಾಯೆಗಳು ಕಾಣಲ್ಲ. ಸಿನಿಮಾದವರು ನಾಟಕ ಮಾಡೋ ರೀತಿಯಲ್ಲಿ ಮಾತನಾಡಿದ್ದಾರೆ. ಹಣ ತೆಗೆದುಕೊಂಡು ಮಜಾ ಮಾಡಿ, ಮತ ಮಾತ್ರ ನನಗೆ ಹಾಕಿ ಎಂದಿದ್ದಾರೆ. ಇವರು ಹೋದಲ್ಲೆಲ್ಲಾ ಜನ ಸೇರಲು ಹಣ ಹಂಚುತ್ತಿದ್ದಾರೆ, ಯಾರ ಮೂಲಕ ಹಣ ಹಂಚುತ್ತಿದ್ದಾರೆ ಎಂದು ನನಗೆ ಗೊತ್ತಿಲ್ಲವೇ ಎಂದು ಪ್ರಶ್ನಿಸಿದರು.
ತಮ್ಮ ಫೋನನ್ನು ಕದ್ದಾಲಿಕೆ ಮಾಡಲಾಗುತ್ತಿದೆ, ಮನೆ ಮುಂದೆ ಗೂಢಚಾರಿ ಬಿಟ್ಟಿದ್ದಾರೆ ಎಂದು ಆರೋಪಿಸುತ್ತಾರೆ. ಇವರ ಫೋನನ್ನು ಕದ್ದಾಲಿಕೆ ಮಾಡಲು ಅವರೇನು ಮಹಾನ್ ವ್ಯಕ್ತಿಯೇ?ಒಂದು ವೇಳೆ ತಮ್ಮ ಗಮನಕ್ಕೆ ಬಾರದೆ ಸರ್ಕಾರದ ಯಾವುದೇ ಸಚಿವರು ಇವರ ಫೋನನ್ನು ಕದ್ದಾಲಿಕೆ ಮಾಡುತ್ತಿದ್ದರೆ ಇವರಿಗೆ ಬೆಂಬಲ ನೀಡಿರುವ ಬಿಜೆಪಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿದೆ. ಆ ಮೂಲಕ ತನಿಖೆ ಮಾಡಿಸಿ ಸತ್ಯಾಂಶ ಹೊರಗೆ ತರಿಸಲಿ ಎಂದು ಸಿಎಂ ಸವಾಲು ಹಾಕಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com