ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಇಂದು ದೂರು ಸಲ್ಲಿಸಿದೆ.
ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಇಂದು ದೂರು ಸಲ್ಲಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸದಿದ್ದರೆ  ದೇಶ ವಿರೋಧಿಗಳು ಎಂದು ಈ ಹಿಂದೆ ತೇಜಸ್ವಿ ಸೂರ್ಯ  ನೀಡಿದ್ದ ಹೇಳಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ತೇಜಸ್ವಿ ಸೂರ್ಯ ಮೋದಿ ಬೆಂಬಲಿಸದವರನ್ನು ದೇಶ ವಿರೋಧಿಗಳು ಎಂದು ಕರೆಯುವ ಮೂಲಕ  ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅವಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.
ತೇಜಸ್ವಿ ಸೂರ್ಯ ಅವರ ವಿರುದ್ಧ ಮಹಿಳೆ ಮೇಲೆ ದೌರ್ಜನ್ಯ ಎಸಗಿದ ಹಾಗೂ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಈ ಯುವಕ ಬಿಜೆಪಿಯ ಮತ್ತೊಬ್ಬ ಎಂ.ಜೆ.ಅಕ್ಬರ್ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com