ಐಟಿ ರೇಡ್ ಟೆನ್ಷನ್ ನಡುವೆಯೇ ರಾತ್ರಿ ಐಪಿಎಲ್ ಪಂದ್ಯ ವೀಕ್ಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ!

ಐಟಿ ದಾಳಿಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಮೈತ್ರಿ ಸರ್ಕಾರದ ದೋಸ್ತಿ ನಾಯಕರು ಬೀದಿಗಿಳಿದು ಹೋರಾಟ ನಡೆಸಿದ್ದರೆ, ಅತ್ತ ಮಾಜಿ ಸಿಎಂ ಹಾಗೂ ದೋಸ್ತಿ ಸರ್ಕಾಯ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಮಾತ್ರ ಐಪಿಎಲ್ ಪಂದ್ಯ ವೀಕ್ಷಣೆ ಮಾಡಿ ರಿಲ್ಯಾಕ್ಸ್ ಮೂಡ್ ಗೆ ಜಾರಿದ್ದರು.
ಐಪಿಎಲ್ ಪಂದ್ಯ ವೀಕ್ಷಣೆಯಲ್ಲಿ ಸಿದ್ದರಾಮಯ್ಯ
ಐಪಿಎಲ್ ಪಂದ್ಯ ವೀಕ್ಷಣೆಯಲ್ಲಿ ಸಿದ್ದರಾಮಯ್ಯ
ಬೆಂಗಳೂರು: ಲೋಕಸಭಾ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಜೆಡಿಎಸ್ ನಾಯಕರ, ಆಪ್ತರ ಮನೆಗಳ ಮೇಲೆ ದಾಳಿ ಮಾಡುವ ಮೂಲಕ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ಐಟಿ ದಾಳಿಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಮೈತ್ರಿ ಸರ್ಕಾರದ ದೋಸ್ತಿ ನಾಯಕರು ಬೀದಿಗಿಳಿದು ಹೋರಾಟ ನಡೆಸಿದ್ದರೆ, ಅತ್ತ ಮಾಜಿ ಸಿಎಂ ಹಾಗೂ ದೋಸ್ತಿ ಸರ್ಕಾಯ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಮಾತ್ರ ಐಪಿಎಲ್ ಪಂದ್ಯ ವೀಕ್ಷಣೆ ಮಾಡಿ ರಿಲ್ಯಾಕ್ಸ್ ಮೂಡ್ ಗೆ ಜಾರಿದ್ದರು.
ಹೌದು.. ನಿನ್ನೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ ಸಿಬಿ ವರ್ಸಸ್ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ವೀಕ್ಷಣೆಗೆ ಸಿದ್ದರಾಮಯ್ಯ ಅವರು ಆಗಮಿಸುವ ಮೂಲಕ ಅಚ್ಚರಿ ಮೂಡಿಸಿದರು. ಅತ್ತ ಜೆಡಿಎಸ್-ಕಾಂಗ್ರೆಸ್ ನಾಯಕರ ಮೇಲೆ ಇಂದು ಐಟಿ ಅಧಿಕಾರಿಗಳು ದಾಳಿ ನಡೆಸಿದರೇ, ಇತ್ತ ಐಟಿ ರೇಡ್ ಟೆನ್ಷನ್ ಇಲ್ಲದೇ ಮಾಜಿ ಸಿಎಂ ಸಿದ್ದರಾಮಯ್ಯನವರು ಐಪಿಎಲ್ ಮ್ಯಾಚ್ ವೀಕ್ಷಣೆಯಲ್ಲಿ ಮುಳುಗಿದ್ದರು. ತೆರಿಗೆ ಇಲಾಖೆ ಅಧಿಕಾರಿಗಳು ದೋಸ್ತಿ ಸರ್ಕಾರದ ಸಚಿವರು, ಸಂಸದರ ಮೇಲೆ ದಾಳಿ ನಡೆಸಿ ತನಿಖೆ ನಡೆಸಿದ್ದಾರೆ. ಇದಕ್ಕೆ ಮೈತ್ರಿ ನಾಯಕರು ತೀವ್ರ ವಿರೋಧವನ್ನೂ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಕೇಂದ್ರದ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯನವರು ಐಪಿಎಲ್​​​ ಪಂದ್ಯ ವೀಕ್ಷಿಸಿದರು.
ಕಾಂಗ್ರೆಸ್-ಜೆಡಿಎಸ್ ಶಾಸಕರ ಮೇಲೆ ಗುರುವಾರ ಬೆಳಿಗ್ಗೆ ಐಟಿ ದಾಳಿ ಆಗುತ್ತದೆ ಎಂದು ಕುಮಾರಸ್ವಾಮಿ ಅವರು ನಿನ್ನೆಯೇ ಹೇಳಿದ್ದರು. ಸಿಎಂ ಹೇಳಿಕೆ ನೀಡಿದ್ದ ಕೆಲವೇ ಗಂಟೆಗಳಲ್ಲಿ ಐಟಿ ದಾಳಿ ಪ್ರಾರಂಭವಾಯಿತು. ಸುಮಾರು 15 -20 ಕಡೆಗಳಲ್ಲಿ ಐಟಿ ದಾಳಿ ನಡೆಯಿತು. ಇದೀಗ ಐಟಿ ದಾಳಿ ಭೀತಿಯಲ್ಲಿ ಇತ್ತ ದೋಸ್ತಿ ನಾಯಕರಿದ್ದರೇ, ಮಾಜಿ ಸಿಎಂ ಸಿದ್ದರಾಮಯ್ಯ ಮಾತ್ರ ಯಾವುದೇ ರಾಜಕೀಯ ಒತ್ತಡವಿಲ್ಲದೇ ಆರ್​​ಸಿಬಿ ಪಂದ್ಯ ವೀಕ್ಷಿಸುವ ಮೂಲಕ ಕೊಂಚ ರಿಲ್ಯಾಕ್ಸ್ ಮೂಡ್ ಗೆ ಜಾರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com