ಸುಮಲತಾ ಬೆನ್ನಲ್ಲೇ ಮಂಡ್ಯ ಜಿಲ್ಲಾಧಿಕಾರಿ ವಿರುದ್ಧ ಬಿಎಸ್‌ಪಿ ಅಭ್ಯರ್ಥಿ ನಂಜುಂಡಸ್ವಾಮಿ ಆಕ್ರೋಶ!

ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ ಎಂದು ಮಂಡ್ಯ ಲೋಕಸಭೆ ಕ್ಷೇತ್ರದ ಪಕ್ಷೇತ್ತರ ಅಭ್ಯರ್ಥಿ ಸುಮಲತಾ ಅಂಬರೀಶ್...
ನಿಖಿಲ್ ಕುಮಾರ್-ನಂಜುಂಡಸ್ವಾಮಿ
ನಿಖಿಲ್ ಕುಮಾರ್-ನಂಜುಂಡಸ್ವಾಮಿ
Updated on: 
ಮಂಡ್ಯ: ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ ಎಂದು ಮಂಡ್ಯ ಲೋಕಸಭೆ ಕ್ಷೇತ್ರದ ಪಕ್ಷೇತ್ತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಆರೋಪ ಬೆನ್ನಲ್ಲೇ ಇದೀಗ ಬಿಎಸ್‌ಪಿ ಅಭ್ಯರ್ಥಿ ನಂಜುಂಡಸ್ವಾಮಿ ಅವರು ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಜಿಲ್ಲಾಧಿಕಾರಿಯವರೂ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ. ರಾಷ್ಟ್ರೀಯ ಪಕ್ಷವಾದ ನನಗೆ ಎವಿಎಂ ನಲ್ಲಿ 1ನೇ ಕ್ರಮ ಸಂಖ್ಯೆ ನೀಡಬೇಕಿತ್ತು. ಆದರೆ ಗೋಲ್ ಮಾಲ್ ಮಾಡಿ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರ್ ಅವರಿಗೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಮಂಡ್ಯ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡುವಂತೆ ಸುಮಲತಾ ಅವರ ಏಜೆಂಟ್ ದೂರು ನೀಡಿದ್ದು ಇದೀಗ ನಂಜುಂಡಸ್ವಾಮಿ ಅವರು ಸಹ ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾಗಿದ್ದಾರೆ.
ಮಂಡ್ಯ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯಾಗಿ ಮಂಜುಶ್ರೀ ಅವರು ಜೆಡಿಎಸ್ ಪಕ್ಷದ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ. ಹೀಗಾಗಿ ನಮಗೆ ನ್ಯಾಯ ಸಿಗುವ ಭರವಸೆ ನಮಗೆ ಇಲ್ಲ. ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯಾಗಿರುವ ನನಗೆ ನಂಬರ್ 1 ಕ್ರಮಸಂಖ್ಯೆ ನೀಡುವ ಬದಲಿಗೆ ಎರಡನ್ನ ನೀಡಿದ್ದಾರೆ. ಇದರಿಂದ ತಿಳಿಯುತ್ತದೆ ಇದರಲ್ಲಿ ಗೋಲ್ ಮಾಲ್ ನಡೆದಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com