ಮೈಸೂರು ಭಾಗದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಸರಿಯಾದ ಸಮನ್ವಯ ಇಲ್ಲ ಎಂದು ಸಚಿವ ಜಿ,ಟಿ ದೇವೇಗೌಡ ಒಪ್ಪಿಕೊಂಡಿದ್ದಾರೆ, ಕಾಂಗ್ರೆಸ್ ಜೆಡಿಎಸ್ ಕಮಿಟ್ ಮೆಂಟ್ ಬಗ್ಗೆ ಬಹಿರಂಗವಾಗಿ ಪ್ರಶ್ನಿಸಿದ್ದಾರೆ. ಸಿಎಂ ಕುಮಾರಸ್ವಾಮಿ ಮಾಧ್ಯಮಗಳ ಜೊತೆ ಮಾತನಾಡಲು ಹಿಂಜರಿಯುತ್ತಿದ್ದಾರೆ, ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಪರ ಕೆಲಸ ಮಾಡಿದ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಮುಖಂಡರು ಯಾವುದೇ ಕ್ರಮ ಕೈಗೊಳ್ಳಲು ನಿರಾಕರಿಸಿದ್ದಾರೆ.