ಸಿದ್ದರಾಮಯ್ಯ ಬಳೆ ತೊಟ್ಟುಕೊಳ್ಳುವುದೇ ವಾಸಿ: ಶೋಭಾ ವಾಗ್ದಾಳಿ

ಸಿದ್ದರಾಮಯ್ಯನವರು ಸರ್ಕಾರವನ್ನು ತಮ್ಮ ನಿಯಂತ್ರಣದಲ್ಲಿಟ್ಟುಕೊಳ್ಳಲು ಇಲ್ಲಸಲ್ಲದ ರಾಜಕೀಯ ಹುನ್ನಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕಿ ಶೋಭಾ ....
ಸಿದ್ದರಾಮಯ್ಯ ಮತ್ತು ಶೋಭಾ ಕರಂದ್ಲಾಜೆ
ಸಿದ್ದರಾಮಯ್ಯ ಮತ್ತು ಶೋಭಾ ಕರಂದ್ಲಾಜೆ
Updated on: 
ಹುಬ್ಬಳ್ಳಿ: ಸಿದ್ದರಾಮಯ್ಯನವರು  ಸರ್ಕಾರವನ್ನು ತಮ್ಮ ನಿಯಂತ್ರಣದಲ್ಲಿಟ್ಟುಕೊಳ್ಳಲು ಇಲ್ಲಸಲ್ಲದ ರಾಜಕೀಯ ಹುನ್ನಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. 
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೈಲಾಗದವನು ಮೈ ಪರಚಿಕೊಂಡ ಎಂಬ ಗಾದೆ ಮಾತಿನಂತೆ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಅವರಿಗೆ ಸಾಧ್ಯವಾಗದಿದ್ದರೇ ಕೈಗೆ ಬಳೆ ತೊಟ್ಟುಕೊಳ್ಳುವುದೇ ವಾಸಿ ಎಂದು ಲೇವಡಿ ಮಾಡಿದ್ದಾರೆ.
ಮೈತ್ರಿ ಸರ್ಕಾರ ಪ್ರಾರಂಭವಾದ ದಿನದಿಂದ ದಿನ ಬೆಳಗಾದರೇ ನಾನೇ ಮುಂದಿನ ಮುಖ್ಯಮಂತ್ರಿ ಎಂಬ ಹುಳ ಬಿಡುವ ಮೂಲಕ ಮೈತ್ರಿ ಸರ್ಕಾರವನ್ನು ತನ್ನ ಅಂಕೆಯಲ್ಲಿಟ್ಟುಕೊಳ್ಳುವ ಪ್ರಯತ್ನ ಮಾಡುತ್ತಲೇ ಬಂದಿದ್ದಾರೆ ಎಂದು ಆರೋಪಿಸಿದ್ದಾರೆ. 
ಸಿದ್ದರಾಮಯ್ಯ ಅವರು ತಮ್ಮನ್ನು ದೇವರಾಜ ಅರಸ್ ಅವರ ಜೊತೆ ಹೋಲಿಸಿಕೊಳ್ಳುತ್ತಾರೆ ಆದರೆ, ಅವರಿಗೆ ಹೋಲಿಸಿಕೊಳ್ಳುವ ನೈತಿಕತೆ ಸಿದ್ದರಾಮಯ್ಯ ಅವರಿಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com