ಕರ್ನಾಟಕದಲ್ಲಿ ನಾವು 16-018 ಸೀಟುಗಳನ್ನು ಗೆಲ್ಲುತ್ತೇವೆ, ಒಂದು ವೇಳೆ ಸಮ್ಮಿಶ್ರ ಸರ್ಕಾರದ ಮೈತ್ರಿ ಪಕ್ಷಗಳ ನಾಯಕರು ತಮ್ಮ ಎಲ್ಲಾ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಟ್ಟಿಗೆ ಪ್ರಚಾರ ನಡೆಸಿದ್ದರೇ 25 ಸೀಟು ಗೆಲ್ಲಬಹುದಿತ್ತು. ಆದರೆ ಅದು ಸಾಧ್ಯವಾಗಲಿಲ್ಲ, ಜೆಡಿಎಸ್ ಸ್ಪರ್ಧಿಸಿರುವ 7 ಕ್ಷೇತ್ರಗಳ ಪೈಕಿ 5 ರಲ್ಲಿ ಗೆಲುವು ಸಾಧಿಸುತ್ತದೆ. ಮಂಡ್ಯ, ಹಾಸನ ಮತ್ತು ತುಮಕೂರಿನಲ್ಲಿ ಜೆಡಿಎಸ್ ಗೆಲುವು ಖಚಿತ.