ಹೈವೋಲ್ಟೇಜ್ ಮಂಡ್ಯ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಭಾರೀ ಭದ್ರತೆ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಅತ್ಯಂತ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ಮಂಡ್ಯ ಲೋಕಸಭಾ...
ಭದ್ರತಾ ಕೊಠಡಿಯಲ್ಲಿ ಮತ ಎಣಿಕೆಗೆ ಇಟ್ಟಿರುವ ವಿದ್ಯುನ್ಮಾನ ಮತ ಯಂತ್ರಗಳು
ಭದ್ರತಾ ಕೊಠಡಿಯಲ್ಲಿ ಮತ ಎಣಿಕೆಗೆ ಇಟ್ಟಿರುವ ವಿದ್ಯುನ್ಮಾನ ಮತ ಯಂತ್ರಗಳು
Updated on
ಮೈಸೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಅತ್ಯಂತ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ಮಂಡ್ಯ ಲೋಕಸಭಾ ಕ್ಷೇತ್ರ. ನಾಡಿದ್ದು ಗುರುವಾರ ನಡೆಯಲಿರುವ ಮತ ಎಣಿಕೆಗೆ ಮಂಡ್ಯ ಜಿಲ್ಲಾಡಳಿತ ಸರ್ಕಾರಿ ಬಾಲಕರ ಕಾಲೇಜಿನಲ್ಲಿ ಸಕಲ ವ್ಯವಸ್ಥೆಗಳನ್ನು ಮಾಡಿದೆ.
ಮಂಡ್ಯ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ, ಪಕ್ಷೇತರ ಅಭ್ಯರ್ಥಿ ಸುಮಲತಾರೇ ಅಥವಾ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯೇ ಎಂಬ ಕುತೂಹಲ ಫಲಿತಾಂಶ ದಿನದವರೆಗೂ ಇಡೀ ರಾಜ್ಯದ ಜನರ ಮನಸ್ಸಿನಲ್ಲಿದೆ. ಜಿಲ್ಲಾಧಿಕಾರಿ ಪಿ ಸಿ ಜಾಫರ್, ಮಧ್ಯಾಹ್ನಕ್ಕೆ ಮೊದಲೇ ಮತ ಎಣಿಕೆ ಕಾರ್ಯ ಪೂರ್ಣಗೊಳಿಸಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ.
ಮಂಡ್ಯ ಮತ್ತು ಮದ್ದೂರು ಕ್ಷೇತ್ರಗಳಲ್ಲಿ 22 ಸುತ್ತಿನ ಮತ ಎಣಿಕೆ ಕಾರ್ಯ ಹಾಗೂ ಉಳಿದ ಕ್ಷೇತ್ರಗಳಲ್ಲಿ 18 ಸುತ್ತಿನ ಮತ ಎಣಿಕೆ ಕಾರ್ಯ ನಡೆಯಲಿದೆ. ಅಭ್ಯರ್ಥಿಗಳ ಮತ್ತು ರಾಜಕೀಯ ಪಕ್ಷಗಳ ಏಜೆಂಟ್ ಗಳ ಮುಂದೆಯೇ ಮತಪೆಟ್ಟಿಗೆಯ ಭದ್ರತಾ ಕೊಠಡಿಗಳನ್ನು ತೆರೆಯಲಾಗುತ್ತಿದ್ದು 16 ಕೊಠಡಿಗಳಲ್ಲಿ 370 ಚುನಾವಣಾ ಸಿಬ್ಬಂದಿಗಳ ಸಮ್ಮುಖದಲ್ಲಿ 108 ಟೇಬಲ್ ಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com