ಸುಮಲತಾ ಅಂಬರೀಷ್ ಗೆಲುವು, ಮಂಡ್ಯ ಜನತೆಗೆ 'ಡಿಬಾಸ್' ಕೃತಜ್ಞತೆ

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರನ್ನು ಅಭೂತಪೂರ್ವವಾಗಿ ಗೆಲ್ಲಿಸಿರುವ ಜನತೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೃತಜ್ಞತೆ ಸಲ್ಲಿಸಿದ್ದಾರೆ.
ಸುಮಲತಾ ಅಂಬರೀಷ್, ದರ್ಶನ್
ಸುಮಲತಾ ಅಂಬರೀಷ್, ದರ್ಶನ್
Updated on: 

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರನ್ನು ಅಭೂತಪೂರ್ವವಾಗಿ ಗೆಲ್ಲಿಸಿರುವ ಜನತೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್  ಕೃತಜ್ಞತೆ ಸಲ್ಲಿಸಿದ್ದಾರೆ.

ನೀವು ತೋರಿಸಿರುವ ಪ್ರೀತಿಗೆ ಪದಗಳೆ ಬರುತ್ತಿಲ್ಲ.ಸಣ್ಣ ಅಳಿಲು ಸೇವೆಗೆ ದೊಡ್ಡ ಮೊತ್ತದ ಜಯ ತಂದುಕೊಟ್ಟಿದ್ದು,  ಸಾಯುವವರೆಗೂ ಚಿರಖುಣಿಯಾಗಿರುವುದಾಗಿ ಹೇಳಿದ್ದಾರೆ.

ಸುಮಲತಾ ಅಂಬರೀಷ್ ಅವರಿಗೆ ನೀಡಿರುವ ಗೆಲುವನ್ನು ತುಂಬಾ ಜೋಪಾನವಾಗಿ ಕಾಪಾಡಿಕೊಳ್ಳಲಿದ್ದಾರೆ. ತಮ್ಮ ಕೈಲಾದ ಸಹಾಯವನ್ನು ಖಂಡಿತವಾಗಿ ಮಾಡ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ದರ್ಶನ್,  ನೀವೆ ನಮ್ಮ ಪಾಲಿನ ದೇವರಾಗಿದ್ದೀರಿ.  ಮಂಡ್ಯ ಲೋಕಸಭಾ ಕ್ಷೇತ್ರದ ಪ್ರತಿಯೊಬ್ಬ ಮತದಾರರರ ನೆರವನ್ನು ಸಾಯುವವರೆಗೂ ಮರೆಯುವುದಿಲ್ಲ ಎಂದಿದ್ದಾರೆ.

ಇಂಡಿಯಾವನ್ನೇ ತನ್ನ ಚಿತ್ತದಿಂದ ಸೆಳೆದಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ಪ್ರಚಾರದ ಅಖಾಡದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್  ಜೋಡೆತ್ತುಗಳಾಗಿ ಕಾರ್ಯನಿರ್ವಹಿಸಿದ್ದರು. ಎತ್ತಿನ ಗಾಡಿಯಲ್ಲಿ ಇಡೀ ಕ್ಷೇತ್ರ ಸುತ್ತುವ ಮೂಲಕ ಸುಮಲತಾ ಅಂಬರೀಷ್ ಪರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com