ದರ್ಶನ್-ಸುಮಲತಾ-ಯಶ್
ಕರ್ನಾಟಕ
ಲೋಕಸಭಾ ಚುನಾವಣೆ ಇತಿಹಾಸದಲ್ಲೇ ಸುಮಲತಾ ಐತಿಹಾಸಿಕ ಸಾಧನೆ; ಗೆದ್ದ ಮೊದಲ ಸ್ವತಂತ್ರ ಅಭ್ಯರ್ಥಿ!
ದೇಶದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸ್ವತಂತ್ರವಾಗಿ ಸ್ಪರ್ಧಿಸಿದ್ದ ನಟಿ ಸುಮಲತಾ ಅಂಬರೀಶ್ ಅವರು ಭರ್ಜರಿ...
ಮಂಡ್ಯ: ದೇಶದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸ್ವತಂತ್ರವಾಗಿ ಸ್ಪರ್ಧಿಸಿದ್ದ ನಟಿ ಸುಮಲತಾ ಅಂಬರೀಶ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ಬಳಿಕ ಜೆಡಿಎಸ್ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದನ್ನು ಕುಮಾರಸ್ವಾಮಿ ಅವರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು. ಆದರೆ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಸುಮಲತಾ ಅವರು 90 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ವಿಜಯ ಪಾತಾಕೆ ಹಾರಿಸಿದ್ದಾರೆ.
ಒಟ್ಟಿನಲ್ಲಿ ಮಗನನ್ನು ಗೆಲ್ಲಿಸಬೇಕು ಎಂದು ಪಣತೊಟ್ಟಿದ್ದ ಕುಮಾರಸ್ವಾಮಿ ಅವರ ಅಹಂಗೆ ಕೊಡಲಿಪೆಟ್ಟು ಬಿದ್ದಿದೆ. ಸ್ವತಂತ್ರ್ಯ ನಂತರ ನಡೆದ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿ ಸ್ವತಂತ್ರ್ಯವಾಗಿ ಸ್ಪರ್ಧಿಸಿ ಗೆದ್ದ ಇತಿಹಾಸ ಇಲ್ಲ ಎಂದು ಹೇಳಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ