ಹಾಲಿ ಲೋಕಸಭಾ ಚುನಾವಣೆಯಲ್ಲಿ ಭಾರಿ ಜಿದ್ದಾಜಿದ್ದಿನಿಂದ ಕೂಡಿದ್ದ ಕ್ಷೇತ್ರ ಅದು ಮಂಡ್ಯ ಲೋಕಸಭಾ ಕ್ಷೇತ್ರ. ಇಲ್ಲಿ ಸುಮಲತಾ ಅಂಬರೀಶ್ ಅವರು ತಮ್ಮ ಪ್ರತಿಸ್ಪರ್ಧಿ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಸುಮಾರು 60 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದು, ಮೊದಲ ಪ್ರಯತ್ನದಲ್ಲೇ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇದೀಗ ಮಂಡ್ಯ ಫಲಿತಾಂಶದ ಕುರಿತು ಎಲ್ಲಡೆ ಬಾರಿ ಚರ್ಚೆಗಳು ನಡೆಯುತ್ತಿದ್ದು, ನಿಖಿಲ್ ಕುಮಾರಸ್ವಾಮಿ ಅವರ ಸೋಲಿಗೆ ಹಲವರು ವಿವಿಧ ರೀತಿಯಲ್ಲಿ ವ್ಯಾಖ್ಯಾನಿಸುತ್ತಿದ್ದಾರೆ.