ಚಾಮುಂಡೇಶ್ವರಿ ಸೋಲಿನ ಸೇಡು ತೀರಿಸಿಕೊಳ್ಳಲು ಸಿದ್ದರಾಮಯ್ಯಗೆ ಅವಕಾಶ ಸಿಕ್ಕಿದೆ: ಶ್ರೀರಾಮುಲು

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಸೋಲಿನ ಸೇಡು ತೀರಿಸಿಕೊಳ್ಳಲು ಇದು ಸದಾವಕಾಶ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿದ್ದಾರೆ....
ಶ್ರೀರಾಮುಲು
ಶ್ರೀರಾಮುಲು
ಮೈಸೂರು: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಸೋಲಿನ ಸೇಡು ತೀರಿಸಿಕೊಳ್ಳಲು ಇದು ಸದಾವಕಾಶ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿದ್ದಾರೆ.
ಮೈಸೂರಿನಲ್ಲಿ  ಮಾತನಾಡಿದ ಮೊಳಕಾಲ್ಮೂರು  ಶಾಸಕ ಶ್ರೀರಾಮುಲು, ಕಳೆದ ವಿಧಾನಸಭೆಯ ಸೋಲಿನ ಸೇಡು ತೀರಿಸಿಕೊಳ್ಳಲು ಮಾಜಿ ಸಿಎಂ ಸಿದ್ದರಾಮಯ್ಯ ಹವಣಿಸುತ್ತಿದ್ದಾರೆ ಎಂದು ಹೇಳಿದ್ದಾರೆ. 
ಹಾವಿನ ದ್ವೇಷದಂತೆ ಸಿದ್ದರಾಮಯ್ಯ ಅವರು ಈ ಚುನಾವಣೆ ಮೂಲಕ ಸೇಡನ್ನು ತೀರಿಸಿಕೊಳ್ಳಲು ಮುಂದಾಗಿದ್ದಾರೆ. ಇತ್ತ ಸಚಿವ ಜಿ.ಟಿ.ದೇವೆಗೌಡರು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸೋತರೆ ಜವಾಬ್ದಾರಿ ನಾನಲ್ಲ ಅಂತ ಈಗಾಗಲೇ ತಿಳಿಸಿದ್ದಾರೆ. ಈ ಮೂಲಕ ಮೈತ್ರಿಯಲ್ಲಿ ಸಮನ್ವಯತೆ ಇಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ ಎಂದು ತಿಳಿಸಿದರು.

ಅಧಿಕಾರ ಕಳೆದುಕೊಂಡು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮತಿಭ್ರಮಣೆ ಉಂಟಾಗಿದೆ. ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಲೆಕ್ಕಕಿಟ್ಟಿಲ್ಲ. ಲೋಕಸಭಾ ಚುನಾವಣೆಯಲ್ಲಿ ಮೂಲೆಗುಂಪು ಮಾಡಲಾಗಿದೆ. ಬ್ಯಾನರ್ ಗಳಲ್ಲಿ ಮಾಜಿ ಸಿಎಂ ಹೆಸರು ಫೋಟೋ ಹಾಕುತ್ತಿಲ್ಲ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ಸಚಿವ ಜಿ.ಟಿ.ದೇವೇಗೌಡ ವಿರುದ್ಧ ಸೋತಿದ್ದರು. ಚಾಮುಂಡೇಶ್ವರಿ ಸೋಲಿನ ಸೇಡು ತೀರಿಸಿಕೊಳ್ಳಲು ಸಿದ್ದರಾಮಯ್ಯಗೆ ಅವಕಾಶ ಸಿಕ್ಕಿದೆ ಎಂದು ಹೇಳಿದರು.
ತಮ್ಮ ಸೋಲಿನ ಸೇಡು ತೀರಿಸಿಕೊಳ್ಳಲು ಹವಣಿಸುತ್ತಿರುವ ಸಿದ್ದರಾಮಯ್ಯ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ದೇವೇಗೌಡರ ಕುಟುಂಬದ ವಿರುದ್ಧ ಸೇಡು ತೀರಿಸಿಕೊಳ್ಳಲು ಹವಣಿಸುತ್ತಿರುವ ಸಿದ್ದರಾಮಯ್ಯ ಅವರಿಗೆ ಲೋಕಸಭೆ ಚುನಾವಣೆ ವೇದಿಕೆಯಾಗಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com