ಉಡುಪಿ-ಚಿಕ್ಕಮಗಳೂರು ಕೈ ಬಂಡಾಯ ಅಭ್ಯರ್ಥಿಅಮೃತ್ ಶಣೈ ಕೆಪಿಸಿಸಿಯಿಂದ ಅಮಾನತು

ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ....
ಅಮೃತ್ ಶೆಣೈ
ಅಮೃತ್ ಶೆಣೈ
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಅಮಾನತು ಮಾಡಲಾಗಿದೆ.
ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮದ್ವರಾಜ್ ವಿರುದ್ಧ ಪಕ್ಷೇತರವಾಗಿ ಕಣಕ್ಕಿಳಿದು  ಪಕ್ಷಕ್ಕೆ ಸೆಡ್ಡು ಹೊಡೆದಿದ್ದ ಉದ್ಯಮಿ ಅಮೃತ್ ಶಣೈ  ಅವರನ್ನು ಅಮಾನತುಗೊಳಿಸಿರುವುದಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ.
ಆದರೆ ಉದ್ಯಮಿ, ಸಾಮಾಜಿಕ ಕ್ಷೇತ್ರಗಳಲ್ಲಿಯೂ ಗುರುತಿಸಿಕೊಂಡಿರುವ ಶಣೈ "ತಮಗೆ ಗೆಲ್ಲುವ ವಿಶ್ವಾಸವಿದೆ, ಕ್ಷೇತ್ರದ ಜನತೆ ಬುದ್ದಿವಂತರಿದ್ದಾರೆ." ಎಂದು ಆಶಾಭಾವ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಇದೇ ಬಗೆಯ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಬೀದರ್ ನ ಕಾಂಗ್ರೆಸ್ ಸಮಿತಿ ಸದಸ್ಯ ಶಾಮಲ್ ಹಕ್ ಬುಖಾರಿ ಅವರನ್ನು ಸಹ ಕೆಪಿಸಿಸಿಯಿಂದ ಅಮಾನತು ಮಾಡಲಾಗಿದೆ. ಇವರು ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಬಿಎಸ್ಪಿ ನಿಂದ ಕಣದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com