ಇಷ್ಟು ದಿನ ಅಪ್ಪ, ಮಕ್ಕಳು ಸೊಸೆಯಂದಿರ ಕಾಟ, ಈಗ ಮೊಮ್ಮಕ್ಕಳ ಕಾಟ: ಬಿಎಸ್ ವೈ

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ಕುಟುಂಬದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು...
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
ಹಾಸನ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ಕುಟುಂಬದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ  ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು, ಇಷ್ಟು ದಿನ ಅಪ್ಪ, ಮಕ್ಕಳು, ಸೊಸೆಯಂದಿರ ಕಾಟವೇ ಸಾಕಾಗಿತ್ತು. ಈಗ ಮೊಮ್ಮಕ್ಕಳ ಕಾಟ ಬೇರೆ ಶುರುವಾಗಿದೆ ಎಂದು ಲೇವಡಿ ಮಾಡಿದ್ದಾರೆ.
ಇಂದು ಹಾಸನದ ಬೇಲೂರಿನಲ್ಲಿ ಬಿಜೆಪಿ ಅಭ್ಯರ್ಥಿ ಎ ಮಂಜು ಪರ ಪ್ರಚಾರ ನಡೆಸಿದ ಯಡಿಯೂರಪ್ಪ, ಅಪ್ಪ, ಮಕ್ಕಳ, ಮೊಮ್ಮಕ್ಕಳ ದಬ್ಬಾಳಿಕೆಯನ್ನು ಕೊನೆಗಾಣಿಸೋ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.
ಹಣ, ಹೆಂಡ, ತೋಳ್ಬಲ, ಅಧಿಕಾರದಿಂದ ಗೆಲ್ಲಬಹುದು ಎಂದುಕೊಂಡವರಿಗೆ ಜನರು ತಕ್ಕಪಾಠ ಕಲಿಸಬೇಕು ಎಂದಿದ್ದಾರೆ.
ಇದೇ ವೇಳೆ ಎ ಮಂಜು ನಾಳೆ ನಮ್ಮ ಮನೆ ಬಾಗಿಲಿಗೆ ಬರುತ್ತಾರೆ ಎಂಬ ಪ್ರಜ್ವಲ್ ರೇವಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಎಸ್ ವೈ, ನಿನ್ನೆ ಮೊನ್ನೆ ರಾಜಕಾರಣಕ್ಕೆ ಬಂದವರು ಹಗುರವಾಗಿ ಮಾತನಾಡುವುದನ್ನು ಬಿಡಬೇಕು. ಅಪ್ಪನ ಬಲದಿಂದ ಚುನಾವಣೆಗೆ ನಿಂತಿದ್ದೇನೆ ಎಂಬ ಭ್ರಮೆಯಲ್ಲಿ ಹಗುರವಾಗಿ ಮಾತನಾಡುವುದನ್ನು ಇನ್ನಾದರೂ ನಿಲ್ಲಿಸಲಿ. ಎ ಮಂಜು ಯಾರು ಎಂಬುದು ಜನರಿಗೆ ಗೊತ್ತಿದೆ. ಅವರು ಗೆದ್ದು ದಿಲ್ಲಿಗೆ ಹೋಗುತ್ತಾರೆ, ಇವರು ಮನೆಗೆ ಹೋಗುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಹಣದ ಬಲ, ಹೆಂಡದ ಬಲ, ತೋಳ್ಬಲದಿಂದ, ಅಧಿಕಾರ ಬಲದಿಂದ ಜಾತಿಯ ವಿಷ ಬೀಜ ಬಿತ್ತುವ ಎಚ್‌ಡಿಡಿ ಕುಟುಂಬಕ್ಕೆ ತಕ್ಕ ಪಾಠ ಕಲಿಸುವ ಸಮಯ ಸಿಕ್ಕಿದೆ. ಕುಮಾರಸ್ವಾಮಿ ಅಧಿಕಾರಕ್ಕೆ ಬಂದ 24 ಗಂಟೆಯ ಒಳಗೆ ಸಾಲಮನ್ನಾ ಮಾಡುತ್ತೇವೆ ಎಂದರು. ಆದರೆ ಮಾಡಿದ್ದುಕೇವಲ  4.5 ಕೋಟಿ ಮಾತ್ರ ಎಂದರು.
ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡುವ ಚಿಂತನೆ ಮಾಡಲಾಗಿದೆ. ಸಾಮಾನ್ಯ ನಾಗರಿಕ ಸಂಹಿತೆ ಬಗ್ಗೆ ಮೋದಿ ಹೇಳಿದ್ದಾರೆ. ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತರಲು ನರೇಂದ್ರ ಮೋದಿ ಪಣ ತೊಟ್ಟಿದ್ದಾರೆ. ಆ ಎಲ್ಲ ಯೋಜನೆಗಳ ಜಾರಿಗೆ ಎ. ಮಂಜು ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com