ಮಂಡ್ಯ: ಸಚಿವ ಸಿ.ಎಸ್ ಪುಟ್ಟರಾಜು ಮತ್ತು ಮಾಜಿ ಸಂಸದ ಜಿ.ಮಾದೇಗೌಡ ವಿರುದ್ಧ ಎಫ್ಐಆರ್ ದಾಖಲು

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ಮಾಜಿ ಸಂಸದ, ಕಾವೇರಿ ಹೋರಾಟಗಾರ ಜಿ. ಮಾದೇಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ...

Published: 10th April 2019 12:00 PM  |   Last Updated: 10th April 2019 02:22 AM   |  A+A-


CS Puttaraju and G madhegowda

ಜಿ.ಮಾದೇಗೌಡ ಮತ್ತು ಪುಟ್ಟರಾಜು

Posted By : SD SD
Source : Online Desk
ಮಂಡ್ಯ: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ಮಾಜಿ ಸಂಸದ, ಕಾವೇರಿ ಹೋರಾಟಗಾರ ಜಿ. ಮಾದೇಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ವಿರುದ್ಧ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ದಾಖಲಾಗಿದೆ.

ಚುನಾವಣಾ ಖರ್ಚಿಗಾಗಿ ಹಣದ ಬೇಡಿಕೆ ಇಟ್ಟಿದ್ದ ಸಂಬಂಧ ಚುನಾವಣಾಧಿಕಾರಿ ಜಗದೀಶ್ ದೂರು ಆಧರಿಸಿ ಐಪಿಸಿ ಸೆಕ್ಷನ್ 171(ಇ)ರ ಅಡಿಯಲ್ಲಿ ಎಫ್​ಐಆರ್​ ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣವನ್ನು ಚುನಾವಣಾ ಆಯೋಗಕ್ಕೆ ವರ್ಗಾಯಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಬೆಂಬಲ ವ್ಯಕ್ತಪಡಿಸಿರುವ ಜಿ.ಮಾದೇಗೌಡ, ವ್ಯಕ್ತಿಯೊಬ್ಬರ ಮೊಬೈಲ್ ನಿಂದ ಸಚಿವರ ಮೊಬೈಲ್​ಗೆ ಕರೆ ಮಾಡಿಸಿ ಚುನಾವಣೆ ಮಾಡಲು ಹಣ ಕಳಿಸಿಕೊಡುವಂತೆ ಸೂಚಿಸಿದ್ದಾರೆ. ಅದಕ್ಕೆ ಸಚಿವರು ಹಣದ ವ್ಯವಸ್ಥೆ ಮಾಡುವುದಾಗಿ ಉತ್ತರಿಸಿದ್ದರು.

ಈ ಆಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಈಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಅಕ್ರಮ ನಡೆಯುತ್ತಿದೆ. ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆರ್.ಟಿ.ಐ. ಕಾರ್ಯಕರ್ತ ರವೀಂದ್ರ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದರು. ಇವರ ದೂರನ್ನು ಆಧರಿಸಿ ಚುನಾವಣಾಧಿಕಾರಿಗಳು ಪೊಲೀಸ್​ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಿದ್ದಾರೆ.
Stay up to date on all the latest ಕರ್ನಾಟಕ news with The Kannadaprabha App. Download now
facebook twitter whatsapp