ಬಿಜೆಪಿ ನಾಯಕರ ಜೊತೆ ಐಟಿ ಮೈತ್ರಿ: ರಿಜ್ವಾನ್‌ ಅರ್ಷದ್

ಬಿಜೆಪಿ ನಾಯಕರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ.
ಬಿಜೆಪಿ ನಾಯಕರ ಜೊತೆ ಐಟಿ ಮೈತ್ರಿ: ರಿಜ್ವಾನ್‌ ಅರ್ಷದ್
ಬಿಜೆಪಿ ನಾಯಕರ ಜೊತೆ ಐಟಿ ಮೈತ್ರಿ: ರಿಜ್ವಾನ್‌ ಅರ್ಷದ್
ಬೆಂಗಳೂರು: ಬಿಜೆಪಿ ನಾಯಕರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಹೀಗಾಗಿ ಕಾಂಗೆಸ್-ಜೆಡಿಎಸ್‌ ಅಭ್ಯರ್ಥಿಗಳನ್ನು ಐಟಿ ಅಧಿಕಾರಿಗಳು ಗುರಿಯಾಗಿಸಿದ್ದಾರೆ ಎಂದು ಬೆಂಗಳೂರು ಕೇಂದ್ರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಿಜ್ವಾನ್‌ ಅರ್ಷದ್‌ ಹೇಳಿದ್ದಾರೆ.
ಗುರುವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ  ರಿಜ್ವಾನ್ ಅರ್ಷದ್ ಆಪ್ತ ಅಮಾನುಲ್ಲಾ ಖಾನ್‌, ಕಮಲ್‌ ಪಾಷಾ, ನಯೀಜ್‌ ಖಾನ್‌ ನಿವಾಸ ಹಾಗೂ ಕಚೇರಿ ಸೇರಿದಂತೆ 20 ಕ್ಕೂ ಹೆಚ್ಚು ಕಡೆ 100 ಕ್ಕೂ ಹೆಚ್ಚು ಐಟಿ ಅಧಿಕಾರಿಗಳು  ಪರಿಶೀಲನೆ ನಡೆಸಿದ್ದರು.
ಐಟಿ ದಾಳಿ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಿಜ್ವಾನ್‌ ಅರ್ಷದ್‌, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಪಿ.ಸಿ.ಮೋಹನ್‌ ಅವರ ಸಾಧನೆ ಶೂನ್ಯ. ಹೀಗಾಗಿ ಕ್ಷೇತ್ರದಲ್ಲಿ ಅವರ ವಿರುದ್ಧದ  ಅಲೆ ಇದೆ. ಬೆಂಗಳೂರಿನ ಮೂರೂ ಕ್ಷೇತ್ರಗಳಲ್ಲಿಯೂ ಬಿಜೆಪಿಗೆ ಸೋಲಿನ ಭೀತಿ ಎದುರಾಗಿದೆ. ಚುನಾವಣಾ ಪ್ರಚಾರದಿಂದ ಹಿಂದೆ ಸರಿಯುವಂತೆ ಮಾಡಲು, ಮುಜಗರ ಸೃಷ್ಟಿಸಲು ಬಿಜೆಪಿ ಜೊತೆ ಒಪ್ಪಂದ ಮಾಡಿಕೊಂಡು ಐಟಿ ದಾಳಿ ನಡೆಸಲಾಗಿದೆ. 15-20 ವ್ಯಕ್ತಿಗಳ ಮೇಲೆ ಐಟಿ ದಾಳಿ ನಡೆಸಲಾಗಿದ್ದು, ತಮಗೆ ಪರಿಚಯವೇ ಇಲ್ಲದ 8-10 ವ್ಯಕ್ತಿಗಳ ಮೇಲೆ ಐಟಿ ದಾಳಿ ನಡೆಸಲಾಗಿದೆ. ಎಂದು ಅವರು ಆರೋಪಿಸಿದರು.
ಕಾಂಗ್ರೆಸ್‌ ಪಕ್ಷದ ಶಾಸಕರ ಖರೀದಿಗೆ ಬಿಜೆಪಿ ನಾಯಕರು 10-20 ಕೋಟಿ ರೂ.ಗಳ ಆಮಿಷವೊಡ್ಡುವ ಮೂಲಕ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡಿದ್ದರು. ಶಾಸಕರ ಖರೀದಿ ಸಂಬಂಧ ಐಟಿ ಇಲಾಖೆಗೆ ಪಕ್ಷದ ವತಿಯಿಂದ ದೂರು ನೀಡಲಾಗಿತ್ತಾದರೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳಲಿಲ್ಲ.  ಕ್ಷೇತ್ರದಲ್ಲಿ ತಮ್ಮ ಪ್ರಚಾರಕ್ಕೆ ಬಿಜೆಪಿ ಅಡ್ಡಿಯುಂಟು ಮಾಡುತ್ತಿದೆ. ಅಭಿವೃದ್ಧಿ ಬಗ್ಗೆ ಚರ್ಚಿಸಲು ಸಾಧ್ಯವಾಗದ ಬಿಜೆಪಿ ನಾಯಕರು ಐಟಿ ದಾಳಿ ಮೂಲಕ ಹೆದರಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ರಿಜ್ವಾನ್‌ ಅರ್ಷದ್‌ ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com