ಪ್ರಧಾನಿ ಮೋದಿ ಮತ ಗಳಿಸಲು ಸೇನೆಯ ಹೆಸರು ಬಳಸಿಕೊಳ್ಳುತ್ತಿದ್ದಾರೆ: ದಿನೇಶ್ ಗುಂಡೂರಾವ್

ಭಾರತೀಯ ಸೇನೆಯ ಹೆಸರಿನಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಪ್ರಧಾನಿ ನರೇಂದ್ರ ಮೋದಿಯವರು ಮತ ...

Published: 11th April 2019 12:00 PM  |   Last Updated: 11th April 2019 12:10 PM   |  A+A-


Dinesh Gundu Rao

ದಿನೇಶ್ ಗುಂಡೂರಾವ್

Posted By : SUD SUD
Source : The New Indian Express
ಬೆಂಗಳೂರು: ಭಾರತೀಯ ಸೇನೆಯ ಹೆಸರಿನಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಪ್ರಧಾನಿ ನರೇಂದ್ರ ಮೋದಿಯವರು ಮತ ಕೇಳುತ್ತಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆರೋಪಿಸಿದೆ.

ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ವಿಧಾನಪರಿಷತ್ ಸಭಾಪತಿ ವಿ ಆರ್ ಸುದರ್ಶನ್ ಹೇಳಿದ್ದಾರೆ. ಚಿತ್ರದುರ್ಗ ಮತ್ತು ಮಹಾರಾಷ್ಟ್ರದ ಲಾತೂರ್ ನಲ್ಲಿ ಪ್ರಚಾರ ಮಾಡುತ್ತಿದ್ದ ವೇಳೆ ಮೋದಿಯವರು ಈ ಬಾರಿ ಮೊದಲ ಸಲ ಮತದಾನ ಮಾಡುತ್ತಿರುವವರು ತಮ್ಮ ಮತವನ್ನು ಬಾಲಾಕೋಟ್ ನಲ್ಲಿ ವಾಯುದಾಳಿ ನಡೆಸಿದ ಸೇನಾಪಡೆಗೆ ಮತ್ತು ಪುಲ್ವಾಮಾದಲ್ಲಿ ಹುತಾತ್ಮರಾದ ಸೈನಿಕರಿಗೆ ಅರ್ಪಿಸಿ ಎಂದು ಕರೆ ನೀಡಿದ್ದಾರೆ.ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ.

ದಾವಣಗೆರೆಯಲ್ಲಿ ನಿನ್ನೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮೋದಿಯವರು ಯುವಜನತೆಗೆ ಹೆಚ್ಚು ಉದ್ಯೋಗಾವಕಾಶ ಸೃಷ್ಟಿ ಮಾಡುತ್ತಿದ್ದರೆ ಇಂದು ಯೋಧರ ಹೆಸರಿನಲ್ಲಿ ಮತ ಕೇಳಬೇಕಾಗದ ಪರಿಸ್ಥಿತಿ ಬರುತ್ತಿರಲಿಲ್ಲ. ಮತಗಳಿಕೆಗೆ ಮೋದಿಯವರು ಸೇನೆಯ ಹೆಸರು ಹೇಳಿಕೊಂಡು ಮತ ಕೇಳುತ್ತಿದ್ದಾರೆ. ವಿರೋಧ ಪಕ್ಷಗಳನ್ನು ಎದುರಿಸಲು ಪಾಕಿಸ್ತಾನವನ್ನು ವಾಕ್ಚಾತುರ್ಯವಾಗಿ ಬಳಸಿಕೊಂಡಿದ್ದಾರೆ. ಚುನಾವಣಾ ಆಯೋಗಕ್ಕೆ ದೂರು ನೀಡಿದರೆ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಆಯೋಗದ ಬಗ್ಗೆ ನಮಗೆ ನಂಬಿಕೆ ಕಳೆದುಹೋಗಿದೆ. ದೂರು ನೀಡಿದರೆ ಯಾವುದೇ ಪ್ರಯೋಜನವಿಲ್ಲ ಎಂದು ದೂರಿದರು.
Stay up to date on all the latest ಕರ್ನಾಟಕ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp