ದೇಶದ ಜನತೆ ಈಗಾಗಲೇ ತೀರ್ಮಾನ ಮಾಡಿದ್ದಾರೆ. ಈ ಬಾರಿಯೂ ಮೋದಿ ಅವರು ಪೂರ್ಣ ಬಹುಮತದೊಂದಿಗೆ ಗೆದ್ದು ಮತ್ತೊಮ್ಮೆ ಪ್ರಧಾನಿ ಆಗುವುದು ನಿಶ್ಚಿತವಾಗಿದೆ. ಇನ್ನೂ ಕೇಂದ್ರ ಸರ್ಕಾರದ ಸಾಧನೆ, ಹಿಂದಿನ ಬಿಜೆಪಿ ಸರ್ಕಾರದ ಸಾಧನೆ, ರಾಜ್ಯ ಸರ್ಕಾರದ ವೈಫಲ್ಯಗಳು ನಮ್ಮ ಗೆಲುವಿಗೆ ಸಹಕಾರಿಯಾಗಲಿವೆ. ಯುವಕರು ಸಹ ತುಂಬಾ ಉತ್ಸಾಹದಿಂದ ಮೋದಿ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಇದೆಲ್ಲಾ ನಮಗೆ ದೊಡ್ಡ ಶಕ್ತಿಯಾಗಿದೆ ಎಂದು ಅವರು ಹೇಳಿದರು.