ಹಾಸನ: ಪ್ಪಜ್ವಲ್ ರೇವಣ್ಣಗೆ ಸಂಕಷ್ಟ, ಆಸ್ತಿ ವಿವರ ಪರಿಶೀಲಿಸುವಂತೆ ಚುನಾವಣಾ ಆಯೋಗ ನೋಟಿಸ್

ಹಾಸನ ಲೋಕಸಭೆ ಕ್ಷೇತ್ರದ ಮೈತ್ರಿ ಸರ್ಕಾರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಸಂಕಷ್ಟ ಎದುರಾಗಿದ್ದು, ಆಸ್ತಿ ವಿವರ ಪರಿಶೀಲಿಸುವಂತೆ ಚುನಾವಣಾ ಆಯೋಗ ನೋಟಿಸ್ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಹಾಸನ: ಹಾಸನ ಲೋಕಸಭೆ ಕ್ಷೇತ್ರದ ಮೈತ್ರಿ ಸರ್ಕಾರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಸಂಕಷ್ಟ ಎದುರಾಗಿದ್ದು, ಆಸ್ತಿ ವಿವರ ಪರಿಶೀಲಿಸುವಂತೆ ಚುನಾವಣಾ ಆಯೋಗ ನೋಟಿಸ್ ನೀಡಿದೆ.
ವರದಿಯೊಂದರ ಅನ್ವಯ 'ಹಾಸನದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಪ್ರಜ್ವಲ್ ರೇವಣ್ಣ ಅವರು ನಾಮಪತ್ರದಲ್ಲಿ ಒದಗಿಸಿರುವ ಆಸ್ತಿ ವಿವರಗಳು ತಾಳೆಯಾಗುತ್ತಿಲ್ಲ ಎಂಬ ಮಾಹಿತಿಯ ಮೇರೆಗೆ ಅವರ ಆಸ್ತಿ ವಿವರವನ್ನು ಮರುಪರಿಶೀಲನೆಗೆ ಒಳಪಡಿಸುವಂತೆ ರಾಜ್ಯ ಚುನಾವಣಾ ಆಯೋಗವು ಜಿಲ್ಲಾ ಚುನಾವಣಾಧಿಕಾರಿಗೆ ನೋಟಿಸ್ ನೀಡಿದೆ. 
ಪ್ರಜ್ವಲ್ ಅವರು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆಸ್ತಿ ವಿವರಗಳನ್ನು ಮರೆಮಾಚಿ ತಪ್ಪು ಮಾಹಿತಿ ಒದಗಿಸಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಟಿ.ಜೆ. ಅಬ್ರಾಹಂ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಈ ದೂರನ್ನು ಪರಿಶೀಲಿಸಿದ ಚುನಾವಣಾ ಆಯೋಗವು ಈ ಬಗ್ಗೆ ವಿಚಾರಣೆ ನಡೆಸುವಂತೆ ಜಿಲ್ಲಾ ಚುನಾವಣಾಧಿಕಾರಿಗೆ ನೋಟಿಸ್ ನೀಡಿದೆ.
ವಿವಿಧ ಕಂಪೆನಿಗಳಲ್ಲಿ ಪ್ರಜ್ವಲ್ ರೇವಣ್ಣ ಪಾಲುದಾರಿಕೆ ಹೊಂದಿದ್ದಾರೆ. ಆದರೆ, ನಾಮಪತ್ರ ಸಲ್ಲಿಕೆ ವೇಳೆ ನೀಡಿದ ಆಸ್ತಿ ವಿವರಗಳಲ್ಲಿ ಇದರ ಬಗ್ಗೆ ಮಾಹಿತಿ ಒದಗಿಸಿಲ್ಲ ಎಂದು ಆರೋಪಿಸಲಾಗಿದೆ. ಇದಕ್ಕೂ ಮೊದಲು ಬಿಜೆಪಿ ಅಭ್ಯರ್ಥಿ ಎ. ಮಂಜು ಕೂಡ ಪ್ರಜ್ವಲ್ ಅವರ ಆಸ್ತಿ ವಿವರದ ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದ್ದರು.  ಪ್ರಜ್ವಲ್ ಅವರು ಎರಡು ಖಾಸಗಿ ಕಂಪೆನಿಗಳಲ್ಲಿ ಷೇರುಗಳನ್ನು ಹೊಂದಿದ್ದು, ಅವುಗಳ ಕುರಿತು ಆಸ್ತಿ ವಿವರದಲ್ಲಿ ಉಲ್ಲೇಖಿಸದೆ ಆಯೋಗವನ್ನು ವಂಚಿಸಿದ್ದಾರೆ. ಹೀಗಾಗಿ ಅವರ ನಾಮಪತ್ರ ತಿರಸ್ಕರಿಸಬೇಕು ಎಂದು ಎ ಮಂಜು ಆಗ್ರಹಿಸಿದ್ದರು. 
ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿನ ಅಧಿಕಾರ್ ವೆಂಚರ್ಸ್ ಎಲ್‌ಎಲ್‌ಪಿ ಮತ್ತು ಡ್ರೋನ್ ವರ್ಕ್‌ಫೋರ್ಸ್ ಎಂಬ ಕಂಪೆನಿಗಳಲ್ಲಿ ಶೇ 20ರಿಂದ ಶೇ 25ರಷ್ಟು ಷೇರುಗಳನ್ನು ಹೊಂದಿದ್ದಾರೆ. ಅವರ ತಾಯಿ ಭವಾನಿ ರೇವಣ್ಣ ಕೂಡ ಕಂಪೆನಿಯಲ್ಲಿ ಪಾಲುದಾರಿಕೆ ಹೊಂದಿದ್ದಾರೆ. ಆದರೆ, ಅವುಗಳ ಬಗ್ಗೆ ಮಾಹಿತಿ ಒದಗಿಸಿಲ್ಲ ಎಂದು ದೂರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com