ಮೋದಿಯಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯ: ಚಂದ್ರಬಾಬು ನಾಯ್ಡು

ಪ್ರಧಾನಿ ನರೇಂದ್ರ ಮೋದಿ ಅವರಿಂದ ಈ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯ ಎದುರಾಗಿದೆ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಡ್ಯ:  ಪ್ರಧಾನಿ ನರೇಂದ್ರ ಮೋದಿ ಅವರಿಂದ ಈ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ  ಅಪಾಯ ಎದುರಾಗಿದೆ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.

ಪಾಂಡವಪುರದಲ್ಲಿ ಇಂದು ರಾತ್ರಿ ನಡೆದ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಅತ್ಯಂತ ಆಘಾತಕಾರಿ ಬೆಳವಣಿಗೆ ಎಂದರು.

ದೇಶದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು,  ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ರೈತರ ಸಂಕಷ್ಟಗಳನ್ನು ಪರಿಹರಿಸುವ ಕನಿಷ್ಠ ಕಾಳಜಿಯನ್ನು ಮೋದಿ ತೋರಿಸಲಿಲ್ಲ.ಇಡಿ, ಐಟಿ, ಸಿಬಿಐ ಸೇರಿದಂತೆ ಸಾಂವಿಧಾನಿಕ ಸಂಸ್ಥೆಗಳನ್ನು ಮಿತಿ ಮೊರಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಚಂದ್ರಬಾಬು ನಾಯ್ಡು ಟೀಕಿಸಿದರು.

ಭಾರತ ದೇಶದ ಪಾಲಿಗೆ ಪ್ರಸಕ್ತ ಚುನಾವಣೆಯು ಅತ್ಯಂತ ಮಹತ್ವದ್ದಾಗಿದೆ. ದೇಶದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ಬರದಂತೆ ತಡೆಯಬೇಕಾದರೆ ಆ ಪಕ್ಷದ ದಕ್ಷಿಣದ ಹೆಬ್ಬಾಗಿಲನ್ನು ಮುಚ್ಚಲೇಬೇಕು ಎಂದು ಚಂದ್ರಬಾಬು ನಾಯ್ಡು ಕರೆ ನೀಡಿದರು.

ದೇಶಕ್ಕೆ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರ ನಾಯಕತ್ವ ಅಗತ್ಯವಿದೆ. ಅವರ ನಾಯಕತ್ವದಲ್ಲೇ ಜಾತ್ಯಾತೀತ ಸರಕಾರ ರಚನೆಯಾಗಬೇಕು. ಕರ್ನಾಟಕದಲ್ಲಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಸದೃಢವಾಗಲು ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com