ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಪ್ರಬುದ್ಧ ರಾಜಕಾರಣಿ- ಎಸ್ .ಎಂ. ಕೃಷ್ಣ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಪ್ರಬುದ್ಧ ರಾಜಕಾರಣಿ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಲೇವಡಿ ಮಾಡಿದ್ದಾರೆ.
ಎಸ್ .ಎಂ. ಕೃಷ್ಣ
ಎಸ್ .ಎಂ. ಕೃಷ್ಣ

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಪ್ರಬುದ್ಧ ರಾಜಕಾರಣಿ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಲೇವಡಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಫೇಲ್ ಸೇರಿದಂತೆ ಕೆಲ ವಿಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಡತ್ತಿರುವ ಆರೋಪದಲ್ಲಿ ಸತ್ಯ ಇಲ್ಲ. ಇಂತಹ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ರಾಹಲ್ ಗಾಂಧಿ ಅಪ್ರಬುದ್ಧ ನಡವಳಿಕೆ ಪ್ರದರ್ಶನ ಮಾಡಿ ಸುಪ್ರೀಂಕೋರ್ಟ್ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅವರದ್ದು ಅನ್ ಲಿಮಿಟೆಡ್ ಅಪ್ರಬುದ್ಧತೆ ಎಂದು ವ್ಯಂಗ್ಯವಾಡಿದರು.

ನರೇಂದ್ರ ಮೋದಿಯಿಂದ  ದೇಶಕ್ಕೆ ಸದೃಢ ನಾಯಕತ್ವ ಲಭಿಸಿದೆ. ಅವರ ಬದ್ಧತೆಯಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಕಿಮ್ಮತ್ತು ಹೆಚ್ಚಾಗಿದೆ. ಅವರು ದಿನದ 18 ಗಂಟೆಯೂ ದೇಶಕ್ಕಾಗಿ ದುಡಿಯುತ್ತಿದ್ದಾರೆ. ದೇಶದಲ್ಲಿ ದೊಡ್ಡ ಪರಿವರ್ತನೆಗೆ ಕಾರಣವಾಗಿರುವ ಮೋದಿಯನ್ನು ಮತ್ತೆ ಪ್ರಧಾನಿಯಾಗಿ ಆಯ್ಕೆ ಮಾಡಬೇಕು ಎಂದು ಅಭಿಪ್ರಾಯಪಟ್ಟರು.

ರಾಹುಲ್ ಗಾಂಧಿ ಪ್ರಧಾನಿಯಾದರೆ ದೇಶದ ಪರಿಸ್ಥಿತಿ ಹೇಗೆ ಇರುತ್ತದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಎಸ್ ಎಂ ಕೃಷ್ಣ ಈ ಬಗ್ಗೆ ಮಾಯಾವತಿ, ಅಖಿಲೇಶ್ ಯಾದವ್ ಅವರನ್ನು ಪ್ರಶ್ನಿಸುವುದು ಸೂಕ್ತ. ಇಡೀ ದೇಶಕ್ಕೆ ಕಾಂಗ್ರೆಸ್ ಅಸ್ಪೃಶ್ಯವಾಗಿದೆ. ಉತ್ತರ ಪ್ರದೇಶದಲ್ಲಿ ಎರಡು ಸೀಟು ಬಿಟ್ಟುಕೊಡುತ್ತೇವೆ ಎಂದು ಮಾಯಾವತಿ , ಅಖಿಲೇಶ್ ಯಾದವ್ ಹೇಳುತ್ತಾರೆ ಎಂದರೆ ಕಾಂಗ್ರೆಸ್ ಪರಿಸ್ಥಿತಿ ಎಷ್ಟು ಚಿಂತಾಜನಕವಾಗಿದೆ ಎಂದು ಊಹಿಸಬಹುದು ಎಂದರು.

ಇನ್ನೂ ದೇವೇಗೌಡರ ಕುರಿತಾಗಿ ಮಾತನಾಡಿದ ಎಸ್ ಎಂ ಕೃಷ್ಮ, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದಕ್ಕೆ ತಡೆ ಹಾಕಲು ದೇವೇಗೌಡರಿಗೆ ಸಾಧ್ಯವಾಗುತ್ತದೆಯಾ? ಎಂದು ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com