ಒತ್ತಡದಲ್ಲಿರುವ ಚುನಾವಣಾ ಆಯೋಗ ಇವಿಎಂ ದೂರು ಕುರಿತಂತೆ ಕ್ರಮ ತೆಗದುಕೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಮೋದಿ ಸರ್ಕಾರದ ಒತ್ತಡದಿಂದ ಕೆಲಸ ಮಾಡುತ್ತಿರುವ ಕೇಂದ್ರ ಚುನಾವಣಾ ಆಯೋಗ ಇವಿಎಂಗೆ ಸಂಬಂಧಿಸಿದ ದೂರುಗಳ ಕುರಿತಾಗಿ ಸರಿಯಾಗಿ ಕ್ರಮ ಜರುಗಿಸುತ್ತಿಲ್ಲ ...
ಸಿದ್ದರಾಮಯ್ಯ
ಸಿದ್ದರಾಮಯ್ಯ
ಮೈಸೂರು: ಮೋದಿ ಸರ್ಕಾರದ ಒತ್ತಡದಿಂದ ಕೆಲಸ ಮಾಡುತ್ತಿರುವ ಕೇಂದ್ರ ಚುನಾವಣಾ ಆಯೋಗ ಇವಿಎಂಗೆ ಸಂಬಂಧಿಸಿದ ದೂರುಗಳ ಕುರಿತಾಗಿ ಸರಿಯಾಗಿ ಕ್ರಮ ಜರುಗಿಸುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಹಲವು ರಾಜಕೀಯ ಪಕ್ಷಗಳು ಇವಿಎಂ ಸರಿಯಾಗಿ ಕಾರ್ಯ ನಿರ್ವಹಿಸುವುದಿಲ್ಲ ಹೀಗಾಗಿ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಬೇಕು ಎಂದು ದೂರಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಇವಿಎಂ ನಿಷೇಧಿಸಿ ಬ್ಯಾಲೆಟ್ ಪೇಪರ್  ಜಾರಿಗೆ ತರುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ,
2014ರ ಚುನಾವಣೆಯಲ್ಲಿಯೇ ಇವಿಎಂ ಮಷಿನ್ ಗಳ ಬದ್ದೆ ಆರೋಪ ಮಾಡಲಾಗಿತ್ತು, ಹೀಗಾಗಿ ದೂರು ನೀಡಲಾಗಿತ್ತು, ಇವಿಎಂ ಯಂತ್ರ ದುರ್ಬಳಕೆ ಮಾಡಿಕೊಳ್ಳದಿದ್ದಾರೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂದು ದೂರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com