ಬಿಜೆಪಿ ಏಜೆಂಟ್ ರೀತಿಯಲ್ಲಿ ಐಟಿ ಇಲಾಖೆ ವರ್ತನೆ, ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪತ್ರ

ಮಂಡ್ಯ ಹಾಗೂ ಹಾಸನದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಬೆಂಬಲಿಗರ ಮನೆ, ವಾಣಿಜ್ಯ ಸಂಕೀರ್ಣಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತಿದ್ದು, ಬೆದರಿಸುವ ತಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ

Published: 16th April 2019 12:00 PM  |   Last Updated: 16th April 2019 09:56 AM   |  A+A-


casual photo

ಸಾಂದರ್ಭಿಕ ಚಿತ್ರ

Posted By : ABN ABN
Source : ANI
ಬೆಂಗಳೂರು:  ಮಂಡ್ಯ ಹಾಗೂ ಹಾಸನದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಬೆಂಬಲಿಗರ ಮನೆ, ವಾಣಿಜ್ಯ ಸಂಕೀರ್ಣಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತಿದ್ದು, ಬಿಜೆಪಿ ವಿರೋಧಿಸುವ ರಾಜಕೀಯ ನಾಯಕರುಗಳು ಹಾಗೂ ಮತದಾರರನ್ನು ಬೆದರಿಸುವ ತಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.

ಬಿಜೆಪಿ ಬೆಂಬಲಿಗರು ಅಥವಾ ನಾಯಕರ ಮೇಲೆ ದಾಳಿ ನಡೆಸದ ಆದಾಯ ತೆರಿಗೆ ಇಲಾಖೆ ಆಡಳಿತಾರೂಢ ಬಿಜೆಪಿಯ ಏಜೆಂಟ್ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಆರೋಪಿಸಲಾಗಿದೆ.

ರಿಯಲ್ ಎಸ್ಟೇಟ್ ಉದ್ಯಮಿಗಳು, ಕಲ್ಲು ಗಣಿಗಾರಿಕೆ ಗುತ್ತಿಗೆದಾರರು ,ಪೆಟ್ರೋಲ್ ಬಂಕ್ ಗಳು, ಸಾ ಮಿಲ್ ಮತ್ತು ಸಹಕಾರ ಬ್ಯಾಂಕುಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು,ಕೇಂದ್ರ ಸರ್ಕಾರದ ಪರವಾಗಿ ಐಟಿ ಇಲಾಖೆ ವರ್ತಿಸುತ್ತಿದೆ ಎಂಬುದು ಸ್ಪಷ್ಟವಾಗಿದೆ ಎಂದು ತಿಳಿಸಲಾಗಿದೆ.

ಚುನಾವಣೆಗಾಗಿ ಬಿಜೆಪಿಗೆ ಹಣಕಾಸು ಸಂಗ್ರಹಿಸುತ್ತಿರುವ  ರೈಲ್ವೆ ,ಕೇಂದ್ರ ಲೋಕೋಪಯೋಗಿ ಇಲಾಖೆ  ಗುತ್ತಿಗೆದಾರರ ಮೇಲೂ ದಾಳಿ ನಡೆಸುವಂತೆ ಆದಾಯ ತೆರಿಗೆ ಇಲಾಖೆಗೆ ನಿರ್ದೇಶನ ನೀಡುವಂತೆ ಪತ್ರದಲ್ಲಿ ಮನವಿ ಮಾಡಿಕೊಳ್ಳಲಾಗಿದೆ

Stay up to date on all the latest ಕರ್ನಾಟಕ news with The Kannadaprabha App. Download now
facebook twitter whatsapp