ಲೈಂಗಿಕ ಕಿರುಕುಳ ಆರೋಪ; ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!

ಲೈಂಗಿಕ ಕಿರುಕುಳ ಮತ್ತು ಮಾನಸಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಲಿ ಮೈಸೂರು-ಕೊಡಗು ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ವಿರುದ್ಧ ಮಹಿಳಾ ಆಯೋಗದಲ್ಲಿ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.

Published: 17th April 2019 12:00 PM  |   Last Updated: 18th April 2019 08:44 AM   |  A+A-


Complaint filed with State Women Commission against BJP candidate from Mysuru Pratap Simha

ಸಂಗ್ರಹ ಚಿತ್ರ

Posted By : SVN SVN
Source : ANI
ಮೈಸೂರು: ಲೈಂಗಿಕ ಕಿರುಕುಳ ಮತ್ತು ಮಾನಸಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಲಿ ಮೈಸೂರು-ಕೊಡಗು ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ವಿರುದ್ಧ ಮಹಿಳಾ ಆಯೋಗದಲ್ಲಿ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.

ಪ್ರತಾಪ್ ಸಿಂಹ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಯುವತಿಯೋರ್ವಳು ಆರೋಪಿಸಿದ್ದು, ಈ ಬಗ್ಗೆ ಪ್ರತಾಪ್ ಸಿಂಹ ಅವರದ್ದು ಎನ್ನಲಾದ ವಾಟ್ಸ್ ಆ್ಯಪ್ ಚಾಟ್, ಆಡಿಯೊ ವೈರಲ್ ಆಗಿದೆ. ಈ ಸಂಬಂಧ ಇದೀಗ ರಾಜ್ಯ ಮಹಿಳಾ ಆಯೋಗದಲ್ಲಿ ಯುವತಿ ದೂರು ಸಲ್ಲಿಕೆ ಮಾಡಿದ್ದಾಳೆ ಎಂದು ಹೇಳಲಾಗಿದೆ. 

ಯುವತಿ ಮತ್ತು ಪ್ರತಾಪ್ ಸಿಂಹ ಜೊತೆಗಿರುವುದು ಎನ್ನಲಾದ ಫೋಟೊಗಳು ಮತ್ತು ಅವರಿಬ್ಬರ ನಡುವಿನ ಫೋನ್ ಸಂಭಾಷಣೆಗಳದ್ದು ಎನ್ನಲಾದ ಆಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
Stay up to date on all the latest ಕರ್ನಾಟಕ news with The Kannadaprabha App. Download now
facebook twitter whatsapp