ಲೋಕಸಭೆ ಚುನಾವಣೆ: ಕರ್ನಾಟಕದ 14 ಕ್ಷೇತ್ರದಲ್ಲಿ ಮತದಾನ ಆರಂಭ

ಏಳು ಹಂತಗಳ ಲೋಕಸಭೆ ಚುನಾವಣೆಯಲ್ಲಿ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಕರ್ನಾಟಕದ ಒಟ್ಟು 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಏಳು ಹಂತಗಳ ಲೋಕಸಭೆ ಚುನಾವಣೆಯಲ್ಲಿ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಕರ್ನಾಟಕದ ಒಟ್ಟು 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ.
ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೂ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಮತದಾರರು ಸರತಿ ಸಾಲಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಮತದಾನ ನಡೆಯುತ್ತಿದೆ.  14 ಕ್ಷೇತ್ರಗಳ ಪೈಕಿ 13ರಲ್ಲಿ ಬಿಜೆಪಿ, 10ರಲ್ಲಿ ಕಾಂಗ್ರೆಸ್, 4ರಲ್ಲಿ ಜೆಡಿಎಸ್ ಸ್ಪರ್ಧಿಸಿದೆ. ಈ 14 ಕ್ಷೇತ್ರಗಳ ಪೈಕಿ ಮಂಡ್ಯ ಕಣ ಅತ್ಯಂತ ಹೈವೋಲ್ಟೇಜ್, ಹಾಟ್‍ಸೀಟ್ ಎನಿಸಿಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com