ಮುಗಿದ ದಕ್ಷಿಣ ಯಾತ್ರೆ: ಉತ್ತರಕ್ಕೆ ದಂಡೆತ್ತಿ ಹೋದ ದಂಡನಾಯಕರು!

ಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದೆ, ಮೊದಲ ಹಂತದಲ್ಲಿ 14 ಕ್ಷೇತ್ರಗಳ ಚುನಾವಣೆ ಮುಗಿದಿದ್ದು ಮೇ 23 ರಂದು ನಡೆಯುವ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದೆ, ಮೊದಲ ಹಂತದಲ್ಲಿ 14 ಕ್ಷೇತ್ರಗಳ ಚುನಾವಣೆ ಮುಗಿದಿದ್ದು ಮೇ 23 ರಂದು ನಡೆಯುವ ಎರಡನೇ ಹಂತದ ಚುನಾವಣೆಗಾಗಿ ರಾಜಕೀಯ ನಾಯಕರು ಉತ್ತರ ಕರ್ನಾಟಕದತ್ತ ಮುಖ ಮಾಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ, ಈಶ್ವರ್ ಖಂಡ್ರೆ, ವಿನಯ್ ಕುಲಕರ್ಣಿ ಮತ್ತು ಅನಂತ್ ಕುಮಾರ್ ಹೆಗಡೆ. ರಮೇಶ್ ಜಿಗಜಿಣಗಿ, ಬಿ.ವೈ ರಾಘವೇಂದ್ರ, ಮತ್ತು ಉಮೇಶ್ ಜಾಧವ್ ಮುಂತಾದ ಪ್ರಮುಖರ ಕಣದಲ್ಲಿದ್ದು, ಮೇ 23 ರಂದು ಇವರ ಭವಿಷ್ಯ ನಿರ್ಧಾರವಾಗಲಿದೆ.
ಪಿಎಂ ಮೋದಿ ಗುರುವಾರ ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ  ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಯಚೂರು ಮತ್ತು ಚಿಕ್ಕೋಡಿಯಲ್ಲಿ ಶುಕ್ರವಾರ ರ್ಯಾಲಿಯಲ್ಲಿ ಪಾಲ್ಗೋಳ್ಳಲಿದ್ದಾರೆ. ರಾಯಚೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಚಂದ್ರಬಾಬು ನಾಯ್ಡು ಭಾಗವಹಿಸಲಿದ್ದಾರೆ. 
ಶನಿವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಹುಬ್ಬಳ್ಳಿ, ಶಿವಮೊಗ್ಗದಲ್ಲಿ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್  ಶನಿವಾರ ಹುಬ್ಬಳ್ಳಿ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ  ತಮ್ಮ ಪುತ್ರ ರಾಘವೇಂದ್ರ ಪರ ಮುಂದಿನ ಮೂರು ದಿನಗಳ ಕಾಲ ಪ್ರಚಾರ ಕಾರ್ಯದಲ್ಲಿ ಪಾಲ್ಗೋಳ್ಳಲಿದ್ದಾರೆ.
ಇನ್ನೂ ಮೈತ್ರಿ ಪಕ್ಷಗಳ ನಾಯಕರು ಕೂಡ ಹೆಚ್ಚಿನ ಪ್ರಮಾಣದಲ್ಲಿ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾವೇರಿಯಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ.
ಇನ್ನೂ ಮುಖ್ಯಮಂತ್ರಿ ಕುಮಾರಸ್ವಾಮಿ, ಕಳೆದ ನಾಲ್ಕು ದಿನಗಳಿಂದ ತಮ್ಮ ಪುತ್ರ ನಿಖಿಲ್ ಪರ ಪ್ರಜಾರಜಲ್ಲಿ ಭಾಗವಹಿಸಿದ್ದರು,ಇಂದು ಶುಕ್ರವಾರ ಹುಬ್ಬಳ್ಳಿಯಲ್ಲಿ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ, ಮುಂದಿನ ಮೂರು ದಿನಗಳ ಕಾಲ ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಪರ ಪ್ರಚಾರ ನಡೆಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com