ಚಿಂಚೋಳಿ ಮೀಸಲು ವಿಧಾನಸಭಾ ಕ್ಷೇತ್ರ: ಕೆ. ರತ್ನಪ್ರಭ ಬಿಜೆಪಿ ಅಭ್ಯರ್ಥಿ?

ರಾಜ್ಯ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ರತ್ನಪ್ರಭ ಅವರನ್ನು ಚಿಂಚೋಳಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ ...
ಕೆ.ರತ್ನಪ್ರಭಾ
ಕೆ.ರತ್ನಪ್ರಭಾ
ಬೆಂಗಳೂರು: ರಾಜ್ಯ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ರತ್ನಪ್ರಭ ಅವರನ್ನು ಚಿಂಚೋಳಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಲಾಗಿದೆ.
ಉಮೇಶ್ ಜಾಧವ್ ಅವರಿಂದ ತೆರವಾಗಿರುವ ಚಿಂಚೋಳಿ ಕ್ಷೇತ್ರದ ಚುನಾವಣೆ ಮೇ 19 ರಂದು ನಡೆಯಲಿದ್ದು ರತ್ನಪ್ರಭಾ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಮೂಲಗಳ ತಿಳಿಸಿವೆ. ರತ್ನಪ್ರಭಾ ಅವರು ಇದರ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. 
ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ನಾಯಕರ ವಿರುದ್ಧ ಸಿಡಿದಿದ್ದ ಉಮೇಶ್ ಜಾಧವ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈಗ ಅವರು ಕಲಬುರಗಿ ಕ್ಷೇತ್ರದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈ ಮೊದಲು ರತ್ನಪ್ರಭಾ ಅವರನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿತ್ತು ಎಂಬ ಮಾತುಗಳು ಕೇಳಿಬರುತ್ತಿತ್ತು.
ಇದರ ಜೊತೆಗೆ ಇತ್ತೀಚೆಗೆ ನಿಧನರಾದ ಸಚಿವ ಶಿವಳ್ಳಿ ಅವರಿಂದ ತೆರವಾಗಿರುವ ಕುಂದಗೋಳ ವಿಧಾನಸಭಾ ಕ್ಷೇತ್ರದ ಚುನಾವಣೆಯು ಮೇ 19 ರಂದೇ ನಡೆಯಲಿದ್ದು, ಈ ಎರಡೂ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com