ದೇವೇಗೌಡರ ವಿರುದ್ಧ ಪ್ರಚಾರ: ಇಬ್ಬರು ಕಾಂಗ್ರೆಸ್‍ ನಾಯಕರ ಉಚ್ಚಾಟನೆ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್‍ ಮೈತ್ರಿ ಅಭ್ಯರ್ಥಿ ಎಚ್.ಡಿ.ದೇವೇಗೌಡ ಅವರ ವಿರುದ್ಧ ಪ್ರಚಾರ ಮಾಡಿದ....
ಎಚ್ ಡಿ ದೇವೇಗೌಡ
ಎಚ್ ಡಿ ದೇವೇಗೌಡ
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್‍ ಮೈತ್ರಿ ಅಭ್ಯರ್ಥಿ ಎಚ್.ಡಿ.ದೇವೇಗೌಡ ಅವರ ವಿರುದ್ಧ ಪ್ರಚಾರ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಬ್ಲಾಕ್‍ ಕಾಂಗ್ರೆಸ್ ಅಧ್ಯಕ್ಷರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ ಗೋರ್ಪಡೆ ಅವರು, ತುಮಕೂರು ಜಿಲ್ಲಾ ಕಾಂಗ್ರೆಸ್‍ ಸಮಿತಿಯ ದೂರಿನ ಹಿನ್ನೆಲೆಯಲ್ಲಿ ಮಧುಗಿರಿ ನಗರ ಬ್ಲಾಕ್‍ ಕಾಂಗ್ರೆಸ್ ಅಧ್ಯಕ್ಷ ಎಸ್.ಆರ್.ರಾಜಗೋಪಾಲ್ ಹಾಗೂ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಲ್ಲಿಕಾರ್ಜುನಯ್ಯ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ತಿಳಿಸಿದ್ದಾರೆ.
ಇವರಿಬ್ಬರೂ ಮಾಜಿ ಪ್ರದಾನಿ ದೇವೇಗೌಡ ಅವರ ಪರ ಪ್ರಚಾರ ನಡೆಸದೆ, ಜಿಲ್ಲಾ ಕಾಂಗ್ರೆಸ್‍ ಹಾಗೂ ಚುನಾವಣೆ ವೀಕ್ಷಕರ ಸಲಹೆಗಳನ್ನು ಧಿಕ್ಕರಿಸಿ, ಅಭ್ಯರ್ಥಿಯ ವಿರುದ್ಧ ಕಾರ್ಯಾಚರಣೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಕಾಂಗ್ರೆಸ್‍ ಸಮಿತಿ ಕೆಪಿಸಿಸಿಗೆ ದೂರು ಸಲ್ಲಿಸಿತ್ತು. 
ಮೊಮ್ಮಗ ಪ್ರಜ್ವಲ್ ದೇವೇಗೌಡ ಅವರಿಗೆ ತಮ್ಮ ಸಾಂಪ್ರದಾಯಿಕ ಕ್ಷೇತ್ರ ಹಾಸನವನ್ನು ಬಿಟ್ಟುಕೊಟ್ಟ ದೇವೇಗೌಡರು ತುಮಕೂರಿನಿಂದ ಸ್ಪರ್ಧಿಸಿದ್ದರು. ಇದಕ್ಕೆ ಕಾಂಗ್ರೆಸ್‍ ನ ಕೆಲ ನಾಯಕರಿಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕ್ಷೇತ್ರದಲ್ಲಿ ಏ.18ರಂದು ಚುನಾವಣೆ ನಡೆದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com