ಚಿಂಚೋಳಿ, ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಧಿಸೂಚನೆ ಪ್ರಕಟ

ಉಮೇಶ್ ಜಾಧವ್ ಅವರ ರಾಜೀನಾಮೆಯಿಂದ ತೆರವಾಗಿರುವ ಚಿಂಚೋಳಿ ಮೀಸಲು ಕ್ಷೇತ್ರ ಹಾಗೂ ಸಚಿವ ಸಿ.ಎಸ್‌.ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ...

Published: 22nd April 2019 12:00 PM  |   Last Updated: 22nd April 2019 02:07 AM   |  A+A-


Umesh Jadhav And C.S Shivalli

ಉಮೇಶ್ ಜಾಧವ್ ಮತ್ತು ಸಿ.ಎಸ್ ಶಿವಳ್ಳಿ

Posted By : SD SD
Source : UNI
ಬೆಂಗಳೂರು: ಉಮೇಶ್ ಜಾಧವ್ ಅವರ ರಾಜೀನಾಮೆಯಿಂದ ತೆರವಾಗಿರುವ ಚಿಂಚೋಳಿ ಮೀಸಲು ಕ್ಷೇತ್ರ ಹಾಗೂ ಸಚಿವ ಸಿ.ಎಸ್‌.ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಅಧಿಸೂಚನೆ ಪ್ರಕಟವಾಗಿದೆ.

ಇದರೊಂದಿಗೆ ನಾಮಪತ್ರ ಸಲ್ಲಿಕೆ ಕಾರ್ಯವೂ ಆರಂಭವಾಗಿದೆ. ಏಪ್ರಿಲ್ 29 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು ಏಪ್ರಿಲ್ 30 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ಮೇ 2 ನಾಮಪತ್ರ ವಾಪಸಾತಿಗೆ ಅಂತಿಮ ದಿನಾಂಕವಾಗಿರುತ್ತದೆ. ಮೇ 19 ರಂದು ಈ ಎರಡೂ ಕ್ಷೇತ್ರಗಳ ಉಪಚುನಾವಣೆ ನಡೆಯಲಿದ್ದು, ಮೇ 23 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
Stay up to date on all the latest ಕರ್ನಾಟಕ news with The Kannadaprabha App. Download now
Poll
Coronavirus Lockdown

ಕರ್ಫ್ಯೂ, ಭಾನುವಾರದ ಲಾಕ್ ಡೌನ್ ನಿಂದ ರಾಜ್ಯದಲ್ಲಿ ಕೊರೋನಾ ಪ್ರಮಾಣ ತಗ್ಗಲಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
facebook twitter whatsapp